logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಅಂಗನವಾಡಿ LKG, UKGಇಂದಿನಿಂದ ಓಪನ್..ಮಕ್ಕಳಿಗೆ ಏನೆಲ್ಲ ನಿಯಮಗಳಿಗೆ ಇಲ್ಲಿ ನೋಡಿ

ಟ್ರೆಂಡಿಂಗ್
share whatsappshare facebookshare telegram
8 Nov 2021
post image

ಬೆಂಗಳೂರು: ಅಂಗನವಾಡಿ ಕೇಂದ್ರ ಆರಂಭದ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಕೋವಿಡ್-19 ಹಿನ್ನಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಫಲಾನುಭವಿಗಳು ಬರುವುದನ್ನು ನಿರ್ಬಂಧಿಸಲಾಗಿತ್ತು. ಅಲ್ಲದೇ ಫಲಾನುಭವಿಗಳ ಮನೆಗೆ ಪೂರಕ ಪೌಷ್ಟಿಕ ಆಹಾರವನ್ನು ವಿತರಿಸಲಾಗುತ್ತಿತ್ತು.

ಅಂಗನವಾಡಿ ಕೇಂದ್ರಗಳನ್ನು ( ಪುನರ್ ಪ್ರಾರಂಭಿಸಲು ಅನುಸರಿಸಬೇಕಾದ ಮಾರ್ಗಸೂಚಿ ಕ್ರಮಗಳು

ಅಂಗನವಾಡಿ ಕೇಂದ್ರದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರು ಎರಡು ಡೋಸ್ ಲಸಿಕೆ ಪಡೆದಿರಬೇಕು. ಕೇಂದ್ರದ ಒಳ ಆವರಣ ಮತ್ತು ಸುತ್ತಮುತ್ತಲಿನ ಆವರಣವನ್ನು ಸ್ವಚ್ಛಗೊಳಿಸುವುದು ಅಂಗವಾಡಿ ಕೇಂದ್ರಗಳಲ್ಲಿನ ಪಾಕೋಪಕರಣ, ಮಕ್ಕಳು ಕುಳಿತುಕೊಳ್ಳಲು ಉಪಯೋಗಿಸಿದ ಜಮಖಾನ, ಡೆಸ್ಕ್, ಕುರ್ಚಿ, ಆಟಿಕೆ ಸಮಾನುಗಳನ್ನು ಅಂಗನವಾಡಿ ಪ್ರಾರಂಭದ ಹಿಂದಿನ ದಿನ ಶುಚಿಗೊಳಿಸುವುದು. ಶೌಚಾಲಯ, ಅಂಗನವಾಡಿಯ ನೆಲ, ಗೋಡೆ, ಕಿಟಕಿ, ಬಾಗಿಲು ಮುಂತಾದವುಗಳನ್ನು ಸೋಪಿನ ದ್ರಾವಣದಲ್ಲಿ ಸ್ವಚ್ಚಗೊಳಿಸುವುದು. ಪೌಷ್ಟಿಕ ಆಹಾರ ತಯಾರಿಸುವ ಎಲ್ಲಾ ಪಾತ್ರೆ, ಲೋಟ, ಕುಕ್ಕರ್ ಶುಚಿಗೊಳಿಸುವುದು. ಅಂಗನವಾಡಿ ಕೇಂದ್ರಗಳನ್ನು ತೆರೆಯುವ ಬಗ್ಗೆ ಗ್ರಾಮ ಪಂಚಾಯ್ತಿ ಮತ್ತು ಬಾಲವಿಕಾಸ ಸಮಿತಿಯ ಸದಸ್ಯರಿಗೆ ಮಾಹಿತಿ ನೀಡುವುದು. ಅಂಗನವಾಡಿ ಕೇಂದ್ರಗಳಿಗೆ ಹಾಜರಾಗಲು ಇಚ್ಚಿಸುವ ಮಕ್ಕಳ ಪೋಷಕರಿಂದ ಒಪ್ಪಿಗೆ ಪತ್ರವನ್ನು ಕಡ್ಡಾಯವಾಗಿ ಅಂಗನವಾಡಿ ಕಾರ್ಯಕರ್ತೆಯು ಪಡೆಯುವುದು ಅಂಗವಾಡಿ ಕೇಂದ್ರಗಳ ಫಲಾನುಭವಿಗಳ ಎಲ್ಲಾ ಪೋಷಕರು 2 ಡೋಸ್ ಕೋವಿಡ್ ಲಸಿಕೆ ಪಡೆದಿರಬೇಕು. ಕೋವಿ ಪಾಸಿಟಿವಿಟಿ ದರ 2ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ ಅಂಗನವಾಡಿ ಕೇಂದ್ರಗಳನ್ನು ಪ್ರಾಂಭಿಸುವುದು. ಅಂಗನವಾಡಿ ಕೇಂದ್ರಗಳನ್ನು ಮೊದಲಿನ ಹಂತದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ತೆರೆಯುವುದು. ಎಲ್ ಕೆ ಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ಅನುಸರಿಸಬೇಕಾದ ಮಾರ್ಗಸೂಚಿ ಕ್ರಮಗಳು

ರಾಜ್ಯದಲ್ಲಿನ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಶಾಲೆಗಳಲ್ಲಿನ ಹಾಗೂ ಪೂರ್ವ ಪ್ರಾಥಮಿಕ ಶಾಲೆಗಳಲ್ಲಿನ ಎಲ್ ಕೆ ಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ಶಾಲೆಗಳ ಎಲ್ಲಾ ಶಿಕ್ಷಕರು, ವಿದ್ಯಾರ್ಥಿಗಳಿಗೆ ಅನ್ವಯಿಸುವಂತೆ, ಈ ಕೆಳಕಂಡ ಕ್ರಮವಹಿಸಲು ಸೂಚಿಸಿದೆ.

ದಿನಾಂಕ 08-11-2021ರಿಂದ ಅರ್ಧ ದಿನ ಎಲ್ಲಾ ಶಾಲೆಗಳಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸುವುದು. ಕೋವಿಡ್-19ರ ಸೋಂಕಿನ ಪ್ರಮಾಣ ಶೇ.2ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ ಮಾತ್ರ ಸದರಿ ತರಗತಿಗಳನ್ನು ಭೌತಿಕವಾಗಿ ಪ್ರಾರಂಭಿಸುವುದು. ಶಾಲೆ ಪ್ರಾರಂಭಕ್ಕೂ ಮುನ್ನಾ ಸೋಂಕು ನಿವಾರಕ ದ್ರಾವಣಗಳಿಂದ ಶುದ್ಧೀಕರಿಸುವುದು, ಸ್ಯಾನಿಟೈಸ್ ಮಾಡುವುದು. ಶಾಲೆಗಳಲ್ಲಿ ಹಾಜರಾಗುವ ಎಲ್ ಕೆ ಜೆ ಮತ್ತು ಯುಕೆಜಿ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಪೋಷಕರಿಂದ ಒಪ್ಪಿಗೆ ಪತ್ರ ಕಡ್ಡಾಯವಾಗಿ ತರಬೇಕು. ಶಾಲೆಗೆ ಹಾಜರಾಗುವ ಎಲ್ಲಾ ಶಿಕ್ಷಕರು, ಇತರೆ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಎಚ್ಚರಿಕೆ ವಹಿಸುವುದು. ಶಿಕ್ಷಕರು ಎರಡು ಡೋಸ್ ಲಸಿಕೆ ಹಾಕಿಸಿಕೊಂಡಿರಬೇಕು. ಮಕ್ಕಳಿಗೆ ಮನೆಯಿಂದಲೇ ಉಪಹಾರ, ಕುಡಿಯುವ ಶುದ್ಧನೀರನ್ನು ಕಳುಹಿಸುವಂತೆ ಎಲ್ಲಾ ಪೋಷಕರಿಗೆ ಸೂಚಿಸುವುದು. ಶಾಲೆಗಳಲ್ಲಿ ಮಕ್ಕಳಿಗೆ ಕುಡಿಯಲು ಬಿಸಿನೀರು ವ್ಯವಸ್ಥೆ ಮಾಡುವುದು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.