



ಕಾರ್ಕಳ: ಜೀವನದ . ಕಠಿಣ ಪರಿಶ್ರಮ, ನಿರಂತರ ತೊಡಗಿಸಿಕೊಳ್ಳುವಿಕೆ, ಬಂದ ಸವಾಲುಗಳಿಗೆ ಎದೆಯೊಡ್ಡಿ ನಿಂತಾಗ ಮಾತ್ರ ಯಶಸ್ಸು ಹಿಂಬಾಲಿಸಿ ಬರುತ್ತದೆ ಎಂದು ಮಂಗಳೂರಿನ ರಾಮಕೃಷ್ಣ ಕಾಲೇಜು ಪ್ರಾಂಶುಪಾಲ ಬಾಲಕೃಷ್ಣ ಶೆಟ್ಟಿ ಹೇಳಿದರು ಅವರು ಕಾರ್ಕಳ ತಾಲೂಕಿನ ಹಿರ್ಗಾನದ ಆದಿಲಕ್ಷ್ಮೀ ಮಹಾಲಕ್ಷ್ಮೀ ದೇವಸ್ಥಾನದ ಗೀತಾಂಜಲಿ ಸಭಾಭವನದಲ್ಲಿ ನಡೆದ ಕ್ರಿಯೇಟಿವ್ ಕಾಲೇಜಿನ ವಾರ್ಷಿಕೋತ್ಸವ ಆವಿರ್ಭವ್-2023 ಉದ್ಘಾಟಿಸಿ ಮಾತನಾಡಿದರು
ಸಾಧಕರ ಸಾಧನೆಗಳು ಕೇಳಲು ರೋಮಾಂಚನ ಉಂಟುಮಾಡುತ್ತದೆ. ಆದರೆ ಅದರ ಹಿಂದೆ ಬಹುದೊಡ್ಡ ತ್ಯಾಗವಿರುತ್ತದೆ. ಅದು ಕ್ರಿಯೇಟಿವ್ ನ ವಿದ್ಯಾರ್ಥಿಗಳಿಂದ ಸಾಧ್ಯವಾಗಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಕ್ರಿಯೇಟಿವ್ ಕಾಲೇಜಿನಲ್ಲಿ ವಾಸಂಗ ಮಾಡಿ ರಾಜ್ಯದ ವಿವಿಧ ಪ್ರತಿಷ್ಠಿತ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪ್ರಾಚಾರ್ಯರಾದ ವಿದ್ವಾನ್ ಗಣಪತಿ ಭಟ್ ಸಂಸ್ಥೆಯ ಸಾಧನೆಗಳನ್ನು ತಿಳಿಸುವ ವಾರ್ಷಿಕ ವರದಿ ವಾಚಿಸಿದರು. ಸಂಸ್ಥೆಯ ಸಂಸ್ಥಾಪಕರಲ್ಲೋರ್ವರಾದ ಡಾ. ಗಣನಾಥ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಕ್ರಿಯೇಟಿವ್ ಕಾಲೇಜು ಪ್ರಾರಂಭವಾದ ಮೂರೇ ವರ್ಷದ ಅವಧಿಯಲ್ಲಿ ಅನೇಕ ಹೊಸ ಸಾಧನೆಗಳನ್ನು ಮಾಡಿದೆ. ಶೈಕ್ಷಣಿಕವಾಗಿ ಮಾತ್ರವಲ್ಲದೇ ಸಾಮಾಜಿಕವಾಗಿಯೂ ತೊಡಗಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ನವಚೇತನ ನೀಡುವ ಕಾರ್ಯ ವಿದ್ಯಾಸಂಸ್ಥೆಯ ವತಿಯಿಂದ ನಡೆಯುತ್ತಿದೆ ಎಂದು ಹೇಳಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಸಂಸ್ಥಾಪಕರಾದ ಅಶ್ವತ್ ಎಸ್. ಎಲ್ ಅವರು ವಿದ್ಯಾರ್ಥಿಗಳನ್ನು ಕೇವಲ ಅಂಕ ಗಳಿಕೆಗೆ ಮಾತ್ರ ಸೀಮಿತಗೊಳಿಸದೆ ಕಲೆ, ಸಂಸ್ಕೃತಿಯ ಮೂಲಕ ಶ್ರೀಮಂತ ಮೌಲ್ಯಗಳನ್ನು ತಿಳಿಸಲಾಗುತ್ತದೆ ಎಂದು ನುಡಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.