logo
WhatsApp Image 2026-04-02 at 14.46.04.jpeg
hindalco everlast.jpeg

ನಾಳೆ ಉಡುಪಿ ಜಿಲ್ಲೆಯ (ಜುಲೈ 5) ಬೈಂದೂರು, ಕುಂದಾಪುರ ಹಾಗೂ ಬ್ರಹ್ಮಾವರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!

ಟ್ರೆಂಡಿಂಗ್
share whatsappshare facebookshare telegram
4 Jul 2024
post image

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಬೈಂದೂರು, ಕುಂದಾಪುರ ತಾಲೂಕಿನಲ್ಲಿ ಭಾರೀ ವರ್ಷಧಾರೆ ಆಗುತ್ತಿದ್ದು, ನೆರೆ ಭೀತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 5) ರಜೆ ಘೋಷಿಸಲಾಗಿದೆ.

ಭಾರೀ ಗಾಳಿಮಳೆಗೆ ತಾಲೂಕಿನಾದ್ಯಂತ ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಮಳೆ ಮುಂದುವರಿಯುವ ಸಾಧ್ಯತೆ ಇರುವ ಕಾರಣ ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ ಎಸ್.ಆರ್. ರಜೆ ಘೋಷಿಸಿ ಆದೇಶ ನೀಡಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ. ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.