logo
WhatsApp Image 2026-04-02 at 14.46.04.jpeg
hindalco everlast.jpeg

‘ಕಾಂತಾರ-ಚಾಪ್ಟರ್ 1’ ಮತ್ತೋರ್ವ ಕಲಾವಿದ ಹೃದಯಘಾತದಿಂದ ಮೃತ್ಯು.!

ಟ್ರೆಂಡಿಂಗ್
share whatsappshare facebookshare telegram
12 Jun 2025
post image

ಉಡುಪಿ: ರಿಷಬ್ ಶೆಟ್ಟಿ ನಿರ್ದೇಶನ ಮತ್ತು ನಟನೆಯ ‘ಕಾಂತಾರ: ಚಾಪ್ಟರ್ 1’ ಚಿತ್ರದ ಜೂನಿಯರ್ ಆರ್ಟಿಸ್ಟ್ ಒಬ್ಬರು ಮೃತಪಟ್ಟಿದ್ದಾರೆ.

ಮೃತಪಟ್ಟ ವ್ಯಕ್ತಿಯನ್ನು ವಿಜು ವಿಕೆ ಎಂದು ಗುರುತಿಸಲಾಗಿದೆ. ಇವರು ಕೇರಳದ ತ್ರಿಶೂರ್​ನವರು. ‘ಕಾಂತಾರ:ಚಾಪ್ಟರ್ 1’ ಸಿನಿಮಾ ಶೂಟ್​ಗಾಗಿ ಅವರು ಕರ್ನಾಟಕಕ್ಕೆ ಬಂದಿದ್ದರು. ಆಗುಂಬೆಯ ಸಮೀಪದ ಹೋಂ ಸ್ಟೇನಲ್ಲಿ ಉಳಿದುಕೊಂಡಿದ್ದರು. ಜೂನ್ 11ರಂದು ರಾತ್ರಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನ ತೀರ್ಥಹಳ್ಳಿಯ ಆಸ್ಪತ್ರೆಗೆ ರವಾನಿಸುವಾಗ ಮಾರ್ಗ ಮಧ್ಯೆ ನಿಧನ ಹೊಂದಿದ್ದಾರೆ. ಕೇರಳದಿಂದ ಕುಟುಂಬಸ್ಥರು ಬಂದ ಬಳಿಕ ಮುಂದಿನ ಪ್ರಕ್ರಿಯೆ ನಡೆಯಲಿದೆ.

ಚಿತ್ರದ ಮೂವರು ಮೃತ್ಯು: ‘ಕಾಂತಾರ: ಚಾಪ್ಟರ್ 1’ ಸಿನಿಮಾ ಈಗ ಸಾಕಷ್ಟು ಸುದ್ದಿಯಾಗಿದ್ದು, ಇದಕ್ಕೆ ಕಾರಣ ಚಿತ್ರದಲ್ಲಿ ನಟಿಸಿದ ಒಬ್ಬೊಬ್ಬರೇ ಕಲಾವಿದರು ಮೃತಪಡುತ್ತಿರುವುದು. ಈ ಮೊದಲ ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಒಬ್ಬರು ನಿಧನ ಹೊಂದಿದ್ದರು. ಇದಾದ ಬಳಿಕ ಚಿತ್ರದ ಕಲಾವಿದ ರಾಕೇಶ್ ಪೂಜಾರಿ ಮೃತಪಟ್ಟರು. ಈಗ ಸಿನಿಮಾದ ಮತ್ತೋರ್ವ ಜೂನಿಯರ್ ಕಲಾವಿದ ಕೊನೆಯುಸಿರು ಎಳೆದಿದ್ದಾರೆ. ಕೆಲವೇ ತಿಂಗಳ ಅಂತರದಲ್ಲಿ ಚಿತ್ರದ ಮೂವರು ಮೃತಪಟ್ಟಿದ್ದು, ಈ ದುರ್ಘಟನೆ ಚಿತ್ರರಂಗಕ್ಕೆ ಆಘಾತ ತಂದಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.