



ಭೋಪಾಲ್: ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ತರಲಾಗಿದ್ದ ಮತ್ತೊಂದು ಚೀತಾ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಾವನ್ನಪ್ಪಿದೆ.
ದಕ್ಷಳನ್ನು ಉದ್ಯಾನವನದ ಆವರಣದಲ್ಲಿ ಬಿಡಲಾಗಿತ್ತು. ಅಲ್ಲದೆ ಅಲ್ಲಿ ಎರಡು ಗಂಡು ಚೀತಾಗಳನ್ನು ಬಿಡಲಾಗಿತ್ತು. ಈ ವೇಳೆ ಗಂಡು ಚೀತಾಗಳು ಅದರೊಂದಿಗೆ ಕಾಳಗ ನಡೆಸಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಕ್ಷ ಹೆಸರಿನ ಹೆಣ್ಣು ಚೀತಾ ಇಂದು ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಕ್ಷಣ ಅದಕ್ಕೆ ಅಗತ್ಯ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮಧ್ಯಾಹ್ನ 12 ರ ವೇಳೆಗೆ ಅದು ಮೃತಪಟ್ಟಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.