



ಮಂಗಳೂರು:ಕಾಫಿಡೇ ಮಾಲೀಕ ಸಿದ್ದಾರ್ಥ್ ಆತ್ಮಹತ್ಯೆ ಮಾಡಿಕೊಂಡ ಬಳಿಕ ಸುದ್ದಿ ಮಾಡಿದ್ದ ನೇತ್ರಾವತಿ ಸೇತುವೆ ಇದೀಗ ಮತ್ತೆ ಸುದ್ದಿ ಮಾಡಿದೆ.
ಚಿಕ್ಕಮಗಳೂರಿನ ಗೋಕುಲ್ ಫಾರ್ಮ್ ನಿವಾಸಿ ಪ್ರಸನ್ನ (37) ಆತ್ಮಹತ್ಯೆ ಮಾಡಿಕೊಂಡ ಯುವ ಉದ್ಯಮಿ ಎಂದು ಗುರುತಿಸಲಾಗಿದೆ. ತೊಕ್ಕೊಟ್ಟಿನಿಂದ ಮಂಗಳೂರಿಗೆ ಬರುವ ದಾರಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಬಳಿ ಕಾರು ನಿಲ್ಲಿಸಿ ತಡೆಬೇಲಿಯ ಬದಿಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕಾಫಿಡೇ ಮಾಲೀಕ ಸಿದ್ದಾರ್ಥ ಅವರು 4 ವರ್ಷಗಳ ಹಿಂದೆ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದರು. ನಂತರ ಈ ಜಾಗದಲ್ಲಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಪ್ರವೃತ್ತಿ ಜಾಸ್ತಿಯಾಯಿತು. ಈ ಹಿನ್ನೆಲೆಯಲ್ಲಿ ಸೇತುವೆಯ ಎರಡೂ ಬದಿಯಲ್ಲಿ ನೆಟ್ ಅಳವಡಿಸಿದ ತಂತಿ ಬೇಲಿ ಹಾಕಲಾಯಿತು. ಇದೀಗ ತಂತಿ ಬೇಲಿ ಬದಿಯಿಂದಲೇ ಪ್ರಸನ್ನ ಅವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.