logo
WhatsApp Image 2026-04-02 at 14.46.04.jpeg
hindalco everlast.jpeg

ದರ್ಶನ್ ಗೆ ಮತ್ತೊಂದು ಶಾಕ್, ಪತ್ನಿ ವಿಜಯಲಕ್ಷ್ಮಿ ಅರ್ಜಿ ವಜಾ

ಟ್ರೆಂಡಿಂಗ್
share whatsappshare facebookshare telegram
8 Oct 2026
post image

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರಿಗೆ ಮತ್ತೊಂದು ಕಾನೂನು ಹಿನ್ನಡೆಯಾಗಿದೆ.

ಪ್ರಕರಣದ 14ನೇ ಆರೋಪಿ ಪ್ರದೂಷ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿರುವುದನ್ನು ಪ್ರಶ್ನಿಸಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಪ್ರಕರಣದಲ್ಲಿ ಮಹತ್ವದ ತಿರುವು ನೀಡಿದ್ದ ಆರೋಪಿ ಪ್ರದೂಷ್, ನ್ಯಾಯಾಲಯದ ಮುಂದೆ ಮಾಫಿ ಸಾಕ್ಷಿಯಾಗಲು ಒಪ್ಪಿಕೊಂಡಿದ್ದರು. ಆದರೆ, ಸಿಆರ್‌ಪಿಸಿ ಸೆಕ್ಷನ್ 164ರ ಅಡಿಯಲ್ಲಿ ಸೂಕ್ತ ನಿಯಮಗಳನ್ನು ಪಾಲಿಸದೆ ಹಾಗೂ ಸಹ-ಆರೋಪಿಗಳ ಗಮನಕ್ಕೆ ತರದೆ ಪ್ರದೂಷ್‌ಗೆ ಮಾಫಿ ಸಾಕ್ಷಿ ಸ್ಥಾನಮಾನ ನೀಡಲಾಗಿದೆ ಎಂದು ಆರೋಪಿಸಿ ವಿಜಯಲಕ್ಷ್ಮಿ ಅವರು ಈ ಹಿಂದೆ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು.

ಆದರೆ, ಹೈಕೋರ್ಟ್ ಅರ್ಜಿಯನ್ನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ವಿಜಯಲಕ್ಷ್ಮಿ ಅವರು ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳ ಪೀಠ, ವಿಚಾರಣಾ ನ್ಯಾಯಾಲಯ ಹಾಗೂ ಹೈಕೋರ್ಟ್ ತೆಗೆದುಕೊಂಡಿರುವ ನಿರ್ಧಾರದಲ್ಲಿ ಯಾವುದೇ ಕಾನೂನುಬಾಹಿರ ಅಂಶ ಕಂಡುಬಂದಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಬಳಿಕ ವಿಜಯಲಕ್ಷ್ಮಿ ಅವರ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.