logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಮುಖ್ಯಮಂತ್ರಿಗೆ ಮನವಿ.

ಟ್ರೆಂಡಿಂಗ್
share whatsappshare facebookshare telegram
10 May 2022
post image

ಹೆಬ್ರಿ: ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಪ್ರಮಾಣ ಶೇಕಡ 3 ರಿಂದ 7.5 ಕ್ಕೆ ಹೆಚ್ಚಳ ಮಾಡುವ ಕುರಿತು ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿಯು ಇಂದು ಹೆಬ್ರಿ ತಹಸೀಲ್ದಾರ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. 1958ರಲ್ಲಿ ನಿಗದಿಯಾಗಿದ್ದ ಶೇಕಡ 3ರ ಮೀಸಲಾತಿ ಪ್ರಮಾಣವಾಗಿದ್ದು, 1961 ರ ಜನಗಣತಿಯಲ್ಲಿ ಪರಿಶಿಷ್ಟ ಪಂಗಡದವರ ಜನಸಂಖ್ಯೆ 1,92,096ರಷ್ಟಿದ್ದು, ಮುಂದಿನ 5 ಜನಗಣತಿಯಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಾಗಿ 2011ರಲ್ಲಿ 42,48,987 ಆಗಿರುತ್ತದೆ. ಪರಿಶಿಷ್ಟ ಪಂಗಡದವರ ಜನಸಂಖ್ಯೆ 1961 ರ ಜನಗಣತಿಗೆ ಹೋಲಿಸಿದಲ್ಲಿ 22.11 ರಷ್ಟು ಹೆಚ್ಚಾಗಿರುತ್ತದೆ. ಆದರೆ ಮೀಸಲಾತಿ ಪ್ರಮಾಣ ಶೇಕಡ 3 ರಷ್ಟೆ ಇದೆ. ಪರಿಶಿಷ್ಟ ಪಂಗಡದವರಿಗೆ ಪ್ರಾತಿನಿಧ್ಯ ಸಂಬಂಧಪಟ್ಟಂತೆ ಅನೇಕ ವರ್ಷಗಳಿಂದ ದೊಡ್ಡ ಅನ್ಯಾಯವಾಗಿರುತ್ತದೆ. ಆದ್ದರಿಂದ ಮೀಸಲಾತಿ ಪ್ರಮಾಣವನ್ನೇ ಜನಸಂಖ್ಯೆಗನುಗುಣವಾಗಿ ಶೇಕಡ 7.5ಕ್ಕೆ ಹೆಚ್ಚಿಸಬೇಕೆಂದು ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿಯು ಸರ್ಕಾರವನ್ನು ಒತ್ತಾಯಿಸಿದೆ. ಈ ಸಂದರ್ಭದಲ್ಲಿ ಕ್ರಿಯಾ ಸಮಿತಿಯ ಸದಸ್ಯರಾದ ಗಂಗಾಧರ ಗೌಡ, ನಾಗೇಂದ್ರ ನಾಯ್ಕ, ಸುರೇಶ ನಾಯ್ಕ, ರಾಘವ ನಾಯ್ಕ, ಕೆ ಪುತ್ರನ್, ಪ್ರಕಾಶ ಗೌಡ, ಶ್ರೀಮತಿ ಗೀತಾ ಗೌಡ, ಶೇಖರ ಗೌಡ, ದಿವಾಕರ, ಚಂದ್ರ, ಬೋಗ್ರ ಉಪಸ್ಥಿತಿದ್ದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.