



ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯ ವಿದ್ಯಾರ್ಥಿವೇತನ ತಂತ್ರಾ೦ಶದಲ್ಲಿ ಪ್ರಸಕ್ತ ಸಾಲಿನ (SSP) ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಜನಾಂಗದ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಯೋಜನೆಗೆ ವೆಬ್‌ಸೈಟ್ https://ssp.postmatric.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ 7 ರ ವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ https://dom.karnataka.gov.in , ಸಹಾಯವಾಣಿ ಸಂಖ್ಯೆ: 8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.