



ಉಡುಪಿ, ಜುಲೈ 30: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ, ಜಿಲ್ಲೆಯ ಪರಿಶಿಷ್ಟ ಪಂಗಡದವರು ಹಾಗೂ ಅರಣ್ಯ ಆಧಾರಿತ ಆದಿವಾಸಿ, ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯದ ಜನಾಂಗದವರು ಸ್ವಯಂ ಉದ್ಯೋಗ ಹೊಂದಲು ನೇರಸಾಲ, ಉದ್ಯಮಶೀಲತಾ, ಭೂ ಒಡೆತನ, ಮೈಕ್ರೋ ಕ್ರೆಡಿಟ್ ಹಾಗೂ ಗಂಗಾ ಕಲ್ಯಾಣ ಯೋಜನೆಗಳಡಿ ಸೌಲಭ್ಯ ಪಡೆಯಲು, 18 ರಿಂದ 60 ವರ್ಷದೊಳಗಿನ ಅರ್ಹ ಫಲಾನುಭವಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಬಿ ಬ್ಲಾಕ್, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574884 ಅನ್ನು ಸಂಪರ್ಕಿಸುವ೦ತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.