



ಉಡುಪಿ, ಮಾರ್ಚ್ 07: ವಿಕಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ವಿಕಲಚೇತನರಿಗಾಗಿ ಇಲಾಖೆಯ ಸೌಲಭ್ಯನ್ನು ತಲುಪಿಸುವ ನಿಟ್ಟಿನಲ್ಲಿ ಜಿಲ್ಲೆಯ ನಗರಸಭೆ ವ್ಯಾಪ್ತಿಯಲ್ಲಿ 02, ಪುರಸಭೆ ಮತ್ತು ಪಟ್ಟಣ ಪಂಚಾಯತ್‌ಗಳಲ್ಲಿ ತಲಾ 01ರಂತೆ ನಗರ ಪುನರ್ವಸತಿ ಕಾರ್ಯಕರ್ತರನ್ನು ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ 01 ರಂತೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗಾಗಿ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ದೂ.ಸಂ: 0820-2574810, 2574811 ಹಾಗೂ ಆಯಾ ತಾಲೂಕಿನ ತಾಲೂಕು ಪಂಚಾಯತ್‌ನ ಎಂ.ಆರ್.ಡಬ್ಲೂö್ಯ ರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.