



ಉಡುಪಿ, ಮೇ 31: ಹೊಸದುರ್ಗ ತಾಲೂಕಿನ ಸಾಣೇಹಳ್ಳಿಯ ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯಲ್ಲಿ ಪ್ರಸಕ್ತ ಸಾಲಿನ ರಂಗ ಶಿಕ್ಷಣಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು,ಆಸಕ್ತ ಅಭ್ಯರ್ಥಿಗಳು ಕನಿಷ್ಠ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿದ್ದು, ಪದವೀಧರರಿಗೆ ಆದ್ಯತೆ ಇರುತ್ತದೆ.
ಅಭ್ಯರ್ಥಿಗಳಿಗೆ ರಂಗಭೂಮಿಯಲ್ಲಿ ಆಸಕ್ತಿ ಮತ್ತು ಸ್ವಲ್ಪಮಟ್ಟಿನ ಅನುಭವ ಅಗತ್ಯವಿದ್ದು, ಊಟ ವಸತಿ ವ್ಯವಸ್ಥೆ ದೊರೆಯುತ್ತದೆ. ಕರ್ನಾಟಕ ಹಾಗೂ ಭಾರತದ ರಂಗ ತಜ್ಞರಿಂದ ಮತ್ತು ಅತಿಥಿ ಉಪನ್ಯಾಸಕರಿಂದ ತರಗತಿಗಳು ನಡೆಯಲಿದ್ದು, ಉತ್ತಮ ಗ್ರಂಥಭoಡಾರ ಹಾಗೂ ದೃಶ್ಯಶ್ರವ್ಯ ಪರಿಕರಗಳ ಅನುಕೂಲತೆ ಇದೆ.
ರಂಗಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಭಾರತೀಯ ರಂಗಭೂಮಿ, ಕನ್ನಡ ಮತ್ತು ನಾಟಕ ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ, ಅಭಿನಯ, ಆಹಾರ್ಯ ಶಿಕ್ಷಣದಲ್ಲಿ ರಂಗಭೂಮಿ ಕುರಿತಾದ ಸೈಧ್ದಾಂತಿಕ ಮತ್ತು ಪ್ರಾಯೋಗಿಕ ತರಗತಿಗಳು ನಡೆಯುತ್ತವೆ.
ಅರ್ಜಿಗಳನ್ನು ಪ್ರಾಚಾರ್ಯರು ಶ್ರೀಶಿವಕುಮಾರ ರಂಗಪ್ರಯೋಗ ಶಾಲೆ ಸಾಣೇಹಳ್ಳಿ ಹೊಸದುರ್ಗ ತಾಲೂಕು ಚಿತ್ರದುರ್ಗ ಜಿಲ್ಲೆ ಅಥವಾ ರಂಗಶಾಲೆಯ ವೆಬ್‌ಸೈಟ್ http://www.theatreschoolsanehalli.org/ ನಲ್ಲಿ ಡೌನ್‌ಲೋಡ್ ಮಾಡಿಕೊಂಡು ಜೂನ್ 30 ರೊಳಗೆ ಸಲ್ಲಿಸಬಹುದಾಗಿದ್ದು ಹೆಚ್ಚಿನ ಮಾಹಿತಿಗೆ ದೂ.ಸಂ.9448398144, 8861043553, 9482942394 ಸಂಪರ್ಕಿಸುವoತೆ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.