



ಬೆಂಗಳೂರು:ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವ ಆಚರಣೆಯನ್ನು ರಾಜ್ಯ ಸರ್ಕಾರದಿಂದ ಆಚರಿಸಲಾಗುತ್ತಿದೆ. ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈ ಸಲ ವಿಶೇಷವಾಗಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರನ್ನು ಗುರುತಿಸಿ ಆನ್ ಲೈನ್ ಮೂಲಕ ಅವರ ಹೆಸರು ಶಿಫಾರಸು ಮಾಡಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ಸಾಧಕರನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುವುದು. ಸಾರ್ವಜನಿಕರು ಯಾರೇ ಆಗಲಿ. ಅವರು ಸೇವಾಸಿಂಧು ಫಾರ್ಮ್ ಮೂಲಕ ರಾಜ್ಯೋತ್ಸವ ಪ್ರಶಸ್ತಿಗೆ ಸಿದ್ಧಪಡಿಸಲಾಗಿರುವ ವಿಶೇಷ ನಮೂನೆಯ ಅರ್ಜಿಯಲ್ಲಿ 3 ಹೆಸರುಗಳನ್ನು ಶಿಫಾರಸು ಮಾಡಬಹುದು. ಮೂವರು ಸಾಧಕರ ಹೆಸರು, ಅವರು ಯಾವ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ, ಅವರ ಊರು, ವಿಳಾಸ, ಸಂಪರ್ಕ, ಸಂಖ್ಯೆ ಇತ್ಯಾದಿ ಅರ್ಜಿಯನ್ನು ತುಂಬಬೇಕು.
ಎಲೆಮರೆಯ ಕಾಯಿಯಂತೆ ತಮ್ಮ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದವರ ಹೆಸರು ಸೇವಾಸಿಂಧು ಅರ್ಜಿ ಮೂಲಕ ತಲುಪಿಸಿದರೆ ತಜ್ಞರ ಸಮಿತಿಗೆ ನೀಡಲಾಗುತ್ತದೆ.
ಇದರಿಂದ ನೇರವಾಗಿ ಸಾರ್ವಜನಿಕರೇ ಸಾಧಕರನ್ನು ಆಯ್ಕೆ ಮಾಡಿದಂತಾಗುತ್ತದೆ. ಕ್ರೀಡೆ ಹೊರತುಪಡಿಸಿ ಉಳಿದ ಸಾಧಕರು ಕನಿಷ್ಠ 60 ವರ್ಷ ಮೇಲ್ಪಟ್ಟವರಾಗಿರಬೇಕು ಎಂದು ಸುನೀಲ್ ಕುಮಾರ್ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.