logo
WhatsApp Image 2026-04-02 at 14.46.04.jpeg
hindalco everlast.jpeg

ನಾಲ್ಕು ರಾಜ್ಯಗಳಿಗೆ ಹೊಸ ಬಿಜೆಪಿ ಅಧ್ಯಕ್ಷರ ನೇಮಕ

ಟ್ರೆಂಡಿಂಗ್
share whatsappshare facebookshare telegram
4 Jul 2023
post image

ನವದೆಹಲಿ: ರಾಜ್ಯಗಳ ವಿಧಾನಸಭೆ ಚುನಾವಣೆಗಳು ಮತ್ತು 2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಪಕ್ಷವನ್ನು ಸಂಘಟನಾತ್ಮಕವಾಗಿ ಪುನಶ್ಚೇತನಗೊಳಿಸಲು ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ತನ್ನ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ಮಂಗಳವಾರ ನೇಮಿಸಿದೆ.

ಭಾರತೀಯ ಜನತಾ ಪಕ್ಷವು ನಾಲ್ಕು ರಾಜ್ಯ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸಿದೆ. ವಿಧಾನಸಭೆ ಚುನಾವಣೆ ಎದುರಿಸಲಿರುವ ತೆಲಂಗಾಣದಲ್ಲಿಯೂ ರಾಜ್ಯಾಧ್ಯಕ್ಷರ ಬದಲಾವಣೆಯಾಗಿದೆ.

ತೆಲಂಗಾಣ ಬಿಜೆಪಿ ಅಧ್ಯಕ್ಷರಾಗಿ ಜಿ ಕಿಶನ್ ರೆಡ್ಡಿ, ಆಂಧ್ರಪ್ರದೇಶದ ರಾಜ್ಯಾಧ್ಯಕ್ಷರಾಗಿ ಡಿ. ಪುರಂದೇಶ್ವರಿ, ಜಾರ್ಖಂಡ್‌’ನ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಾಬುಲಾಲ್ ಮರಾಂಡಿ ಮತ್ತು ಪಂಜಾಬ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಸುನೀಲ್ ಜಾಖರ್ ಅವರನ್ನು ನೇಮಕ ಮಾಡಲಾಗಿದೆ.

ಕುತೂಹಲಕಾರಿಯಾಗಿ, ಸುನೀಲ್ ಜಾಖರ್ ಈ ಹಿಂದೆ ಪಂಜಾಬಿನಲ್ಲಿ ಕಾಂಗ್ರೆಸ್ಸಿನ ರಾಜ್ಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ. ತೆಲಂಗಾಣದಲ್ಲಿ ಚುನಾವಣಾ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಈಟಾಲ ರಾಜೇಂದರ್ ಅವರನ್ನು ನೇಮಿಸುವುದಾಗಿ ಬಿಜೆಪಿ ಘೋಷಿಸಿತು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.