logo
WhatsApp Image 2026-04-02 at 14.46.04.jpeg
hindalco everlast.jpeg

ನೀವು ಪಿಂಚಣಿಗೆ ನೋಂದಾಯಿಸಿದ್ದಿರಾ ..72 ಘಂಟೆಗಳಲ್ಲಿ ನಿಮ್ಮ ಮನೆಬಾಗಿಲಿಗೆ ಬರಲಿದೆ .ಪಿಂಚಣಿ ಸೌಲಭ್ಯ '

ಟ್ರೆಂಡಿಂಗ್
share whatsappshare facebookshare telegram
13 May 2022
post image

ಬೆಂಗಳೂರು: ಪಿಂಚಣಿದಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಪಿಂಚಣಿ ಮಂಜೂರಾತಿಗೆ 'ಹಲೋ ಕಂದಾಯ ಸಚಿವರೇ' ಎಂಬ ಸಹಾಯವಾಣಿ ಆರಂಭಿಸಿದ್ದು, ಅರ್ಜಿ ಸಲ್ಲಿಸಿದ 72 ಗಂಟೆ ಒಳಗಾಗಿ ಅರ್ಹ ಫಲಾನುಭವಿಗಳಿಗೆ ಪಿಂಚಣಿ ತಲುಪಿಸುವ ಯೋಜನೆಗೆ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.ಪಿಂಚಣಿ ಸೌಲಭ್ಯ ಪಡೆಯುವುದು ಹೇಗೆ?

ನಾಗರಿಕರು ಶುಲ್ಕ ರಹಿತ ಸಂಖ್ಯೆ 155245ಗೆ ಉಚಿತವಾಗಿ ದೂರವಾಣಿ ಮೂಲಕ ಕಡ್ಡಾಯವಾಗಿ ತಮ್ಮ ಆಧಾರ್ ಸಂಖ್ಯೆ ಒದಗಿಸಿ ಪಿಂಚಣಿ ಸೌಲಭ್ಯ ಕೋರಿಕೆ ಸಲ್ಲಿಸಬಹುದು

ತಮ್ಮ ವ್ಯಾಪ್ತಿಯ ಗ್ರಾಮ ಲೆಕ್ಕಾಧಿಕಾರಿಗಳು ಅರ್ಜಿದಾರರ ಮನೆ ಬಾಗಿಲಿಗೆ ಭೇಟಿ ನೀಡಿ `ನವೋದಯ' ಮೊಬೈಲ್ ಆಯಪ್ ಮೂಲಕ ಅರ್ಜಿದಾರರಿಂದ ಮಾಹಿತಿ ಹಾಗೂ ದಾಖಲಾತಿಗಳ ಸಂಗ್ರಹ.

ಗ್ರಾಮ ಲೆಕ್ಕಾಧಿಕಾರಿಗಳು ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಲ್ಲಿಸಬೇಕಾದ ದಾಖಲೆಗಳು

ಕಡ್ಡಾಯವಾಗಿ ಆಧಾರ್ ಕಾರ್ಡ್

ಬ್ಯಾಂಕ್/ ಅಂಚೆ ಖಾತೆ ವಿವರದ ಪ್ರತಿ

ವಿಳಾಸ ಮತ್ತು ವಯಸ್ಸಿಗೆ ಸಂಬಂಧಿಸಿದ ದಾಖಲಾತಿ (ಪಡಿತರ ಚೀಟಿ, ಚುನಾವಣೆ ಗುರುತಿನ ಚೀಟಿ ಅಥವಾ ಸರ್ಕಾರ ವಿತರಿಸಿದ ಗುರುತಿನ ಚೀಟಿ)

ಮೊಬೈಲ್ ಆಯಪ್ ಮೂಲಕ ಭಾವಚಿತ್ರ ಸೆರೆಹಿಡಿಯವುದು

ಅರ್ಹರಿಗೆ 72 ಗಂಟೆಯೊಳಗೆ ನಾಡ ಕಚೇರಿ ಉಪ ತಹಸೀಲ್ದಾರರಿಂದ ಪಿಂಚಣಿ ಮಂಜೂರಾತಿ ಅನುಮೋದನೆ

ಫಲಾನುಭವಿಗಳ ಮನೆಬಾಗಿಲಿಗೆ ಪಿಂಚಣಿ ಮಂಜೂರಾತಿ ಆದೇಶ ವಿತರಣೆ ಮಾಡಲಾಗುವುದು.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.