logo
WhatsApp Image 2026-04-02 at 14.46.04.jpeg
hindalco everlast.jpeg

ಸೇನಾ ವಿಮಾನ ಪತನ: ನಾಲ್ವರು ಯೋಧರ ಸ್ಥಿತಿ ಗಂಭೀರ

ಟ್ರೆಂಡಿಂಗ್
share whatsappshare facebookshare telegram
27 Aug 2023
post image

ಕ್ಯಾನ್ಬೆರಾ: ವಿವಿಧ ರಾಷ್ಟ್ರಗಳ ಮಿಲಿಟರಿ ತರಬೇತಿ ವೇಳೆ ಅಮೆರಿಕದ ಯುದ್ಧ ವಿಮಾನವೊಂದು ಪತನಗೊಂಡ ಪರಿಣಾಮ ನಾಲ್ವರು ಯೋಧರು ಗಂಭೀರವಾಗಿ ಗಾಯಗೊಂಡ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದೆ.

ವಿಮಾನ ಉತ್ತರ ಆಸ್ಟ್ರೇಲಿಯಾದ ಡಾರ್ವಿನ್ ಬಳಿಯ ದ್ವೀಪದಲ್ಲಿ ಪತನಗೊಂಡಿದೆ. ಗಾಯಗೊಂಡ ನಾಲ್ವರು ಸಿಬ್ಬಂದಿಯಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡವರನ್ನು ಹೆಲಿಕಾಪ್ಟರ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ. ಅವರಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

ಈ ಬಗ್ಗೆ ಪ್ರತಿಕ್ರಿಯಿಸಿರುವ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್, ಗಾಯಗೊಂಡ ಯೋಧರು ಅಮೆರಿಕದವರಾಗಿದ್ದಾರೆ. ಇದೊಂದು ದುರದೃಷ್ಟಕರ ಘಟನೆಯಾಗಿದೆ. ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಈ ಸಮಯದಲ್ಲಿ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

ವಿಮಾನ ಪತನಗೊಂಡ ಸ್ಥಳದಲ್ಲಿ ಅಧಿಕಾರಿಗಳು ಹಾಗೂ ಪೊಲೀಸರು ಬೀಡು ಬಿಟ್ಟಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಸೂಕ್ತ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.