



ಅಮೃತಸರ: ಭ್ರಷ್ಟಾಚಾರದ ವಿರುದ್ಧ ನಿರಂತರ ಹೋರಾಟ ಎಂದು ಘೋಷಿಸಿರುವ ಆಮ್ ಆದ್ಮಿ ಪಕ್ಷಕ್ಕೆ ಮತ್ತೊಮ್ಮೆ ಮುಜುಗರವಾಗಿದೆ. ಪಂಜಾಬ್ ನ ಆಮ್ ಆದ್ಮಿ ಪಕ್ಷದ ಶಾಸಕರೊಬ್ಬರು ಲಂಚ ಸ್ವೀಕರಿಸುವಾಗ ಜಾಗೃತ ದಳದ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾರೆ.
ಆಪ್ ಶಾಸಕ ಅಮಿನ್ ರತನ್ ಕೋಟಪಟ್ಟಾ ಅವರನ್ನು ನಾಲ್ಕು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಬಂಧಿಸಲಾಗಿದೆ. ಇದೀಗ ಆರೋಪಿ ಶಾಸಕನನ್ನು ಭಟಿಂಡಾದ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಗುರಿಪಡಿಸಲಾಗಿದೆ.
ಈ ಹಿಂದೆ ಪಂಜಾಬಿನ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರನ್ನು ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಸಂಪುಟದಿಂದ ಕೈ ಬಿಡಲಾಗಿತ್ತು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.