



ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಕಾವು ಜೋರಾಗಿದ್ದು, ನಾಳೆ ಮತದಾನ ನಡೆಯಲಿದೆ. ಈ ಹಿನ್ನಲೆ ರಾಜ್ಯಾದ್ಯಂತ ಬೀಗಿ ಬಂದೋಬಸ್ತ್ ಮಾಡಲಾಗಿದ್ದು, ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಈ ಮಧ್ಯೆ ಬೆಂಗಳೂರಿನಲ್ಲಿ ಸಿಸಿಬಿ(CCB)ಯ ಮಾದಕ ದ್ರವ್ಯ ನಿಗ್ರಹದಳದಿಂದ ರಾಜ್ಯ, ಅಂತಾರಾಜ್ಯ, ಅಂತಾರಾಷ್ಟ್ರೀಯ ಡ್ರಗ್ಸ್ ಪೆಡ್ಲರ್ಸ್ ಸೇರಿ 19 ಡ್ರಗ್ಸ್ ಪೆಡ್ಲರ್ಗಳನ್ನು ಬಂಧಿಸಿದ್ದಾರೆ. ನೈಜೀರಿಯಾದ ಇಬ್ಬರು, ಕೇರಳದ 12 ಜನ, ಪಶ್ಚಿಮ ಬಂಗಾಳದ ಓರ್ವ ಹಾಗೂ ಬೆಂಗಳೂರಿನ ಇಬ್ಬರು ಸೇರಿ ಒಟ್ಟು 19 ಅರೋಪಿಗಳನ್ನ ಅರೆಸ್ಟ್ ಮಾಡಲಾಗಿದ್ದು, ಬಂಧಿತರಿಂದ 7 ಕೋಟಿ 6 ಲಕ್ಷ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ
ಚುನಾವಣೆ ಹಿನ್ನೆಲೆ ಸ್ಲಂಗಳಲ್ಲಿ ಡ್ರಗ್ಸ್ ಬಳಕೆ ಆಗುವ ಬಗ್ಗೆ ಮಾಹಿತಿ ಬಂದಿದ್ದು, ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ಅಶೋಕನಗರ, ಕೆ.ಆರ್.ಪುರ, ಆರ್.ಟಿ.ನಗರ, ವಿಲ್ಸನ್ಗಾರ್ಡನ್, ಬಾಣಸವಾಡಿ, ಹೆಣ್ಣೂರು, ಯಲಹಂಕ, ಪುಲಿಕೇಶಿನಗರ, ಸಿದ್ದಾಪುರ ಸೇರಿ 10 ಕಡೆ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ವಶಕ್ಕೆ ಪಡೆದ ಎಂಡಿಎಂಎ, ಹಾಶ್ ಆಯಿಲ್, ಗಾಂಜಾ ಸೇರಿ ಸಿಂಥಟಿಕ್ ಡ್ರಗ್ಸ್ ಹಾಗೂ ಕೇಸ್ ಬಗ್ಗೆ ಸಿಸಿಬಿ ಜಂಟಿ ಆಯುಕ್ತ ಶರಣಪ್ಪ ಅವರು ಚುನಾವಣೆ ಆಯೋಗಕ್ಕೂ ಮಾಹಿತಿ ನೀಡಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.