



ನವದೆಹಲಿ: ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಟೀಂ ಇಂಡಿಯಾ ಆಗಸ್ಟ್ 30 ರಿಂದ ಆರಂಭವಾಗಲಿರುವ ಏಷ್ಯಾಕಪ್ನಲ್ಲಿ ಪಾಕಿಸ್ತಾನ ಎಂದು ಬರೆಯಲಾದ ಜೆರ್ಸಿ ತೊಟ್ಟು ಕಣಕ್ಕಿಳಿಯಲಿದೆ.
ಈಗಾಗಲೇ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ, ಪಾಕಿಸ್ತಾನದ ಹೆಸರಿರುವ ಜೆರ್ಸಿ ತೊಟ್ಟಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿವೆ.
ಈ ಬಾರಿಯ ಏಷ್ಯಾಕಪ್‌ಗೆ ಪಾಕಿಸ್ತಾನ ಆತಿಥ್ಯವಹಿಸುತ್ತಿರುವ ಹಿನ್ನೆಲೆಯಲ್ಲಿ ಏಷ್ಯಾಕಪ್ನಲ್ಲಿ ಭಾಗವಹಿಸುವ ಎಲ್ಲ ತಂಡಗಳ ಜೆರ್ಸಿ ಮೇಲೆ ಪಾಕಿಸ್ತಾನದ ಹೆಸರು ಮುದ್ರಿಸಲಾಗಿದೆ. ಹೀಗಾಗಿ ಟೀಂ ಇಂಡಿಯಾದ ಎಲ್ಲ ಆಟಗಾರರೂ ಪಾಕಿಸ್ತಾನದ ಹೆಸರಿರುವ ಜೆರ್ಸಿ ಧರಿಸಿ ಮೈದಾನಕ್ಕಿಳಿಯಲಿದ್ದಾರೆ.
ಈ ಪಂದ್ಯಾವಳಿಯಲ್ಲಿ ಭಾರತ ತನ್ನ ಮೊದಲ ಪಂದ್ಯವನ್ನು ಪಾಕಿಸ್ತಾನದ ವಿರುದ್ಧ ಸೆಪ್ಟೆಂಬರ್ 2 ರಂದು ಕ್ಯಾಂಡಿಯಲ್ಲಿ ಆಡಲಿದೆ. ಏಷ್ಯಾ ಕಪ್‌ನಲ್ಲಿ ಉಭಯ ತಂಡಗಳು ಮೂರು ಬಾರಿ ಮುಖಾಮುಖಿಯಾಗುವ ಸಾಧ್ಯತೆ ಇದೆ. ರೋಹಿತ್ ಶರ್ಮಾ, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ ಭಾರತ ತಂಡ ಪ್ರತಿನಿಧಿಸಲಿದ್ದಾರೆ ಎಂದು ಹೇಳಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.