logo
WhatsApp Image 2026-10-07 at 11.10.42 PM - Copy.jpeg
WhatsApp Image 2026-04-02 at 14.46.04.jpeg

ನಾಡ್ಪಾಲಿನಲ್ಲಿ ವ್ಯಕ್ತಿಗೆ ಹಲ್ಲೆ: ಪ್ರಕರಣ ದಾಖಲು

ಟ್ರೆಂಡಿಂಗ್
share whatsappshare facebookshare telegram
26 Oct 2026
post image

ಹೆಬ್ರಿ, : ಅಂಗಡಿಯೊಂದರ ಬಳಿ ನಿಂತಿದ್ದ ವ್ಯಕ್ತಿಗೆ ಅವಾಚ್ಯವಾಗಿ ನಿಂದಿಸಿ, ಬೆದರಿಕೆ ಹಾಕಿ ಹಲ್ಲೆ ನಡೆಸಿದ ಘಟನೆ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಕ್ರಾಸ್‌ನಲ್ಲಿ ಅ.25ರಂದು ಸಂಜೆ ನಡೆದಿದೆ.

ನಾಡ್ಪಾಲು ಗ್ರಾಮದ ಮಾರುತಿ (36) ಹಲ್ಲೆಗೊಳಗಾದವರು.

ಅ.25ರಂದು ಸಂಜೆ 7.15ರ ವೇಳೆಗೆ ನೆಲ್ಲಿಕಟ್ಟೆ ಕ್ರಾಸ್‌ನಲ್ಲಿರುವ ಸುಜಾತ ಶೆಟ್ಟಿ ಅವರ ಅಂಗಡಿಯ ಬಳಿ ಮಾರುತಿ ನಿಂತಿದ್ದಾಗ, ಪರಿಚಯದ ವಿಜಯ ಶೆಟ್ಟಿ ಮತ್ತೊಬ್ಬ ವ್ಯಕ್ತಿಯೊಂದಿಗೆ ಅಲ್ಲಿಗೆ ಬಂದು ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಹಲ್ಲೆಯಿಂದ ಮಾರುತಿ ಅವರ ಎಡಗೈ ಹಾಗೂ ತಲೆಗೆ ಗಾಯಗಳಾಗಿವೆ. ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.