


ಉಡುಪಿ,: ಕೃಷಿ ಇಲಾಖೆ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಆತ್ಮಯೋಜನೆಯಡಿ ನೇರಗುತ್ತಿಗೆ ಆಧಾರದಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕರು-೦೧ ಹುದ್ದೆಯ ನೇಮಕಾತಿಗಾಗಿ ಷರತ್ತಿಗೊಳಪಟ್ಟು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿ/ಕೃಷಿ ಸಂಬಂಧಿತ ವಿಷಯಗಳಲ್ಲಿ ಪದವಿ ಹಾಗೂ ಕ್ಷೇತ್ರ ಮಟ್ಟದಲ್ಲಿ ಒಂದು ವರ್ಷ ಹೆಚ್ಚಿನ ಅನುಭವವುಳ್ಳ ಅಭ್ಯರ್ಥಿಗಳು ಜನವರಿ 18 ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಸಿ ಬ್ಲಾಕ್, 2 ನೇ ಮಹಡಿ, ಕೊಠಡಿ ಸಂಖ್ಯೆ: ಸಿ-304 ರಜತಾದ್ರಿ, ಮಣಿಪಾಲ, ಉಡುಪಿ ಜಿಲ್ಲೆ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.