



ಕಾರ್ಕಳ :: ಹೆಬ್ರಿ ತಾಲೂಕು ಕಾರ್ಕಳ ತಾಲೂಕಿನಿಂದ ಬೇರ್ಪಟ್ಟು ಪೂರ್ಣ ಪ್ರಮಾಣದ ತಾಲೂಕು ಕೇಂದ್ರದ ೪ಜನರ ಬಹು ಬೇಡಿಕೆಯ ಹೆಬ್ರಿ ಹೋಬಳಿ ರಚನೆ ಆದ ನಂತರ ಇದೀಗ ತಾಲೂಕಿನ ಸಾರ್ವಜನಿಕರಿಗೆ ತ್ವರಿತ ಮತ್ತು ನಿಗದಿತ ಕಾಲಮಿತಿಯಲ್ಲಿ ಸರಕಾರಿ ಸೇವೆಗಳು ಲಭ್ಯವಾಗಬೇಕೆಂಬ ಮಹತ್ವಕಾಂಕ್ಷಿಯಿAದ ಈ ಭಾಗದ ಶಾಸಕರು, ಕರ್ನಾಟಕ ಸರಕಾರದ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರರಾದ ವಿ ಸುನಿಲ್ ಕುಮಾರ್ ರವರ ವಿಶೇಷ ಮುತುವರ್ಜಿ ಮತ್ತು ಸತತ ಪ್ರಯತ್ನದಿಂದಾಗಿ ಇದೀಗ ಅಟಲ್ ಜೀ ಜನಸ್ನೇಹಿ ಕೇಂದ್ರ (ನಾಡಕಛೇರಿ) ಕಾರ್ಯಾರಂಭವಾಗುತ್ತಿದೆ.
ಹೆಬ್ರಿ ತಾಲೂಕು ರಚನೆಗೊಂಡು ತಾಲೂಕು ಕಛೇರಿ ಆರಂಭ ಆಗಿದ್ದರೂ ತಾಲೂಕಿನ ಹೆಚ್ಚಿನ ಗ್ರಾಮಗಳು ಅಜೆಕಾರು ಹೋಬಳಿಗೆ ಒಳಗೊಂಡಿತ್ತು. ಹಾಗೂ ಹೆಬ್ರಿ ತಾಲೂಕಿನ ಸಾರ್ವಜನಿಕರು ಕಂದಾಯ ಇಲಾಖೆಯ ಸೇವೆ ಪಡೆಯಲು ಅಜೆಕಾರು ನಾಡ ಕಛೇರಿಗೆ ಬಂದು ಅರ್ಜಿ ಸಲ್ಲಿಸಬೇಕಾಗಿತ್ತು. ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದ್ದು ಮತ್ತು ಎರಡೂ ಕಡೆ ಒಬ್ಬರೇ ಕಂದಾಯ ನಿರೀಕ್ಷಕರು ಕರ್ತವ್ಯ ನಿರ್ವಹಿಸಬೇಕಾಗಿತ್ತು.
ಈದೀಗ ಹೆಬ್ರಿ ತಾಲೂಕಿಗೆ ಹೆಬ್ರಿ ಹೋಬಳಿ ರಚನೆ ಆಗಿರುವುದರಿಂದ ಮತ್ತು ಹೆಬ್ರಿ ತಾಲೂಕು ಕಛೇರಿಯಲ್ಲಿ ಅಟಲ್‌ಜೀ ಜನಸ್ನೇಹಿ ಕೇಂದ್ರದ ಅಧಿಕೃತ ಕಾರ್ಯಾರಂಭ ಆಗುತ್ತಿರುವುದರಿಂದ ಹೆಬ್ರಿ ತಾಲೂಕು ಕೇಂದ್ರದಲ್ಲಿಯೇ ಕಂದಾಯ ಸೇವೆಗಳು ಆರಂಭವಾಗಲಿದ್ದು, ಹೆಬ್ರಿ ಕೇಂದ್ರ ಸ್ಥಾನಕ್ಕೆ ಓರ್ವ ಕಂದಾಯ ನಿರೀಕ್ಷಕರು ಹಾಗೂ ಇನ್ನಿತರ ಹುದ್ದೆಗಳು ಸೃಷ್ಠಿಯಾಗಲಿದೆ. ಇದರಿಂದ ತಾಲೂಕಿನ ಸಾರ್ವಜನಿಕರಿಗೆ ತ್ವರಿತವಾಗಿ ಮತ್ತು ನಿಗದಿತ ಕಾಲಮಿತಿಯಲ್ಲಿ ಸೇವೆಗಳನ್ನು ಪಡೆಯಲು ಅನುಕೂಲವಾಗಲಿದೆ.
ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಯವರ ನೇತೃತ್ವದ ಕರ್ನಾಟಕ ಸರಕಾರವು ಜನಪರ ಮತ್ತು ಜನಸ್ನೇಹಿ ಆಡಳಿತ ನೀಡುತ್ತಿದ್ದು ಜನರ ಮನೆ ಬಾಗಿಲಿಗೆ ಸರಕಾರದ ಸೇವೆಗಳನ್ನು ಒದಗಿಸುತ್ತಿದೆ ಎಂದು ಮಾನ್ಯ ಸಚಿವರ ಕಛೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.