



ಉಡುಪಿ; ಬೆಳಿಗ್ಗೆ ಆತ್ರಾಡಿ ಗ್ರಾ.ಪಂ ವ್ಯಾಪ್ತಿಯ ಮದಗ ಎಂ ತಾಯಿ ಮತ್ತು 10 ವರ್ಷದ ಮಗುವಿನ ಮೃತದೇಹ ಪತ್ತೆಯಾಗಿದೆ. ಚೆಲುವಿ ( 28) ಹಾಗೂ ಪ್ರಿಯಾ (10) ಮೃತದೇಹವು ಮನೆಯ ಕೋಣೆಯಲ್ಲಿ ಪತ್ತೆಯಾಗಿದೆ.
ಬೆಳಿಗ್ಗೆ ಸ್ಥಳೀಯ ಮನೆಯವರಿಗೆ ಕರೆ ಮಾಡಿ ಚೆಲುವಿಯ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಚೆಲುವಿಯ ತಾಯಿ ಮಾಹಿತಿ ನೀಡಿದ್ದು, ಸ್ಥಳೀಯರು ಮನೆಗೆ ತೆರಳಿದಾಗ ಬಾಗಿಲು ಅರ್ಧ ತೆರೆದಿದ್ದು, ಒಳ ಹೋಗಿ ನೋಡಿದಾಗ ಮೃತ ದೇಹ ಪತ್ತೆಯಾಗಿದೆ
ಸ್ಥಳದಲ್ಲಿ ಹೆಚ್ಚವರಿ ಎಸ್ಪಿ ಸಿದ್ದಲಿಂಗಪ್ಪ, ಡಿವೈಎಸ್ಪಿ ಸುಧಾಕರ್ ನಾಯ್ಕ್, ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತಪದ್ಮನಾಭ ಸೇರಿದಂತೆ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ. ಸ್ಥಳಕ್ಕೆ ಶ್ವಾನ ದಳ, ಬೆರಳಚ್ಚು ತಜ್ಞರು, ಎಫ್.ಎಸ್.ಎಲ್ ತಂಡ ಆಗಮಿಸಿ ಮಾಹಿತಿ ಕಲೆ ಹಾಕುತ್ತಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.