logo
WhatsApp Image 2026-10-07 at 11.10.42 PM - Copy.jpeg
WhatsApp Image 2026-04-02 at 14.46.04.jpeg

ಮಂಗಳೂರಿನ ಹೋಟೆಲ್‌ಗಳು, ಆಹಾರ ತಯಾರಿಕಾ ಘಟಕಗಳ ಮೇಲೆ ದಾಳಿ: ಐಡಿಯಲ್ ಐಸ್ ಕ್ರೀಂ ಘಟಕಕ್ಕೂ ನೋಟಿಸ್

ಟ್ರೆಂಡಿಂಗ್
share whatsappshare facebookshare telegram
18 Nov 2026
post image

ಮಂಗಳೂರು:** ಸಾರ್ವಜನಿಕರಿಗೆ ಶುಚಿ-ರುಚಿಯಾದ ಹಾಗೂ ಸುರಕ್ಷಿತ ಆಹಾರ ಒದಗಿಸುವ ಉದ್ದೇಶದಿಂದ ಆಹಾರ ಸುರಕ್ಷತಾ ಇಲಾಖೆ ಮಂಗಳೂರಿನ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಆಹಾರ ತಯಾರಿಕಾ ಘಟಕಗಳ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿದೆ. ಇದಕ್ಕಾಗಿ ಐದು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ವಿವಿಧೆಡೆ ಅನಿರೀಕ್ಷಿತ ತಪಾಸಣೆ ನಡೆಸಲಾಗಿದೆ ಎಂದು ಜಿಲ್ಲಾ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಸಿ.ಎಚ್. ತಿಳಿಸಿದ್ದಾರೆ.

ತೊಕ್ಕೊಟ್ಟಿನ ಎಂ.ಆರ್. ಸ್ವೀಟ್ಸ್ ಸಾಮಗ್ರಿ ಜಪ್ತಿ, ಪ್ರಕರಣ ದಾಖಲು

ತೊಕ್ಕೊಟ್ಟು ಸಮೀಪದ ಸೇವಂತಿಗುಡ್ಡೆಯಲ್ಲಿರುವ ಎಂ.ಆರ್. ಸ್ವೀಟ್ಸ್ ತಯಾರಿಕಾ ಘಟಕದ ಮೇಲೆ ಅಧಿಕಾರಿಗಳು ದಾಳಿ ನಡೆಸಿದಾಗ ಕನಿಷ್ಠ ನೈರ್ಮಲ್ಯವನ್ನೂ ಕಾಪಾಡಿಕೊಳ್ಳದೆ ಸಿಹಿತಿಂಡಿ ಹಾಗೂ ಇತರ ಆಹಾರ ಪದಾರ್ಥಗಳನ್ನು ತಯಾರಿಸುತ್ತಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಅಲ್ಲಿದ್ದ ಆಹಾರ ಸಾಮಗ್ರಿಗಳನ್ನು ಜಪ್ತಿ ಮಾಡಲಾಗಿದ್ದು, ಘಟಕದ ವಿರುದ್ಧ ಹೆಚ್ಚುವರಿ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಕ್ರಮ ಕೈಗೊಳ್ಳಲಾಗಿದೆ.

ಐಡಿಯಲ್ ಐಸ್ ಕ್ರೀಮ್ ಘಟಕಕ್ಕೆ ನೋಟಿಸ್

ಕೊಲ್ಯದಲ್ಲಿರುವ ಐಡಿಯಲ್ ಐಸ್ ಕ್ರೀಮ್ ಕೋಲ್ಡ್ ಸ್ಟೋರೇಜ್ ಘಟಕಕ್ಕೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಐಸ್ ಕ್ರೀಮ್ ಶೇಖರಣೆಯ ವೇಳೆ ಪಾಲಿಸಬೇಕಾದ ಆಹಾರ ಸುರಕ್ಷತಾ ಮಾನದಂಡಗಳನ್ನು ಪರಿಶೀಲಿಸಿದಾಗ ಕೆಲವು ಲೋಪದೋಷಗಳು ಕಂಡುಬಂದಿವೆ. ಅವುಗಳನ್ನು ಸರಿಪಡಿಸಿಕೊಳ್ಳುವಂತೆ ಘಟಕಕ್ಕೆ ನೋಟಿಸ್ ಜಾರಿ ಮಾಡಲಾಗಿದೆ.

ಸುರತ್ಕಲ್, ಬೈಕಂಪಾಡಿ ಹೋಟೆಲ್‌ಗಳ ಮೇಲೂ ದಾಳಿ

ನವೆಂಬರ್ 16ರಂದು ಸುರತ್ಕಲ್ ಹಾಗೂ ಬೈಕಂಪಾಡಿ ವ್ಯಾಪ್ತಿಯ ಪ್ರಮುಖ ಹೋಟೆಲ್‌ಗಳು, ರಿಟೇಲ್ ಮಳಿಗೆಗಳು ಮತ್ತು ಆಹಾರ ತಯಾರಿಕಾ ಘಟಕಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ನೈರ್ಮಲ್ಯ ಕಾಪಾಡದ ಹೋಟೆಲ್‌ಗಳ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಅಲ್ಲದೆ, ತೀವ್ರ ಅವ್ಯವಸ್ಥೆಯಿಂದ ಕೂಡಿದ್ದ ತಿಂಡಿ ತಯಾರಿಕಾ ಘಟಕವೊಂದಕ್ಕೆ ಬೀಗಮುದ್ರೆ ಹಾಕಲಾಗಿತ್ತು.

ಹೆಗ್ಗಣಗಳ ಓಡಾಟ: ಫಾರ್ಚುನ್ ಇಂಡಸ್ಟ್ರೀಸ್ ಘಟಕ ಸೀಜ್

ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ಫಾರ್ಚುನ್ ಇಂಡಸ್ಟ್ರೀಸ್ ಘಟಕದಲ್ಲಿ ಚೀಸ್ ಬಾಲ್ ಸ್ನ್ಯಾಕ್ಸ್ ತಯಾರಿಸಲಾಗುತ್ತಿತ್ತು. ಈ ವೇಳೆ ಘಟಕದೊಳಗೆ ಹೆಗ್ಗಣಗಳು ಓಡಾಡುತ್ತಿರುವುದು ಹಾಗೂ ತೀವ್ರ ಅನೈರ್ಮಲ್ಯ ಕಂಡುಬಂದಿದೆ. ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಅಧಿಕಾರಿಗಳು ತಕ್ಷಣವೇ ಘಟಕವನ್ನು ಸೀಜ್ ಮಾಡಿ ಬೀಗಮುದ್ರೆ ಹಾಕಿದ್ದಾರೆ ಎಂದು ಡಾ. ಪ್ರವೀಣ್ ಕುಮಾರ್ ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲ ಆಹಾರ ಉದ್ಯಮಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಆಹಾರ ತಯಾರಿಕೆ, ಸಂಗ್ರಹಣೆ ಹಾಗೂ ವಿತರಣೆಯಲ್ಲಿ ನೈರ್ಮಲ್ಯಕ್ಕೆ ಆದ್ಯತೆ ನೀಡಬೇಕು. ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಸುರಕ್ಷತಾ ಇಲಾಖೆ ಎಚ್ಚರಿಕೆ ನೀಡಿದೆ.

WhatsApp Image 2026-11-17 at 7.20.13 PM (1).jpeg
WhatsApp Image 2026-11-08 at 9.04.18 AM (2).jpeg
WhatsApp Image 2026-11-08 at 9.04.18 AM.jpeg
WhatsApp Image 2026-11-08 at 9.04.17 AM.jpeg
mudkuru indpe.jpg
WhatsApp Image 2026-11-08 at 9.04.18 AM (1).jpeg
WhatsApp Image 2026-11-09 at 7.15.05 PM.jpeg
WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.