logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಆಗಸ್ಟ್ 15: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜ್‌ನಲ್ಲಿ “ವಿಜ್ಞಾನ - ವಿಸ್ಮಯ ಮತ್ತು ಕುತೂಹಲ” ವಿಮರ್ಶಾ ಕಾರ್ಯಗಾರ.

ಟ್ರೆಂಡಿಂಗ್
share whatsappshare facebookshare telegram
11 Aug 2024
post image

ಬೆಳ್ತಂಗಡಿ: 78ನೇ ಸ್ವಾತಂತ್ರೊತ್ಸವದ ಪ್ರಯುಕ್ತ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜ್‌ನಲ್ಲಿ “ವಿಜ್ಞಾನ-ವಿಸ್ಮಯ ಮತ್ತು ಕುತೂಹಲ” ಎಂಬ ಶೀರ್ಷಿಕೆಯಡಿಯಲ್ಲಿ ಇದೇ ಬರುವ ಆಗಸ್ಟ್ 15 ರ ಬೆಳಗ್ಗೆ 11.30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ವಿನೂತನ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ.

ಜಗತ್ತಿನ ವಿಸ್ಮಯಕ್ಕೆ ಒಳಗಣ್ಣು ತೆರೆದಿಟ್ಟು, ಅನುಭವಿಸಿ, ಅರ್ಥೈಸಿ, ವಿವೇಚನೆಗೊಳಪಡಿಸುವ ವಿಶೇಷ ಸಂವಾದ ಇದಾಗಿದ್ದು, ಯುವ ಮನಸ್ಸುಗಳ ಮೇಲೆ ವೈಜ್ಞಾನಿಕ ವಿಶ್ಲೇಷಣೆಯ ಪ್ರಭಾವ ಬೀರಿ ಊಹೆಗೆ ನಿಲುಕದ ಪ್ರಕೃತಿಯ ವಿಸ್ಮಯವನ್ನು ಅರ್ಥೈಸಿಕೊಳ್ಳುವ ಒಂದು ವಿಶೇಷ ಪ್ರಯತ್ನ ಇದಾಗಿದೆ. ಸಾಂಪ್ರದಾಯಿಕ ಪಾಠ-ಪ್ರವಚನ ಮತ್ತು ಪರೀಕ್ಷಾ ಪದ್ಧತಿಗಿಂತ ವಿಭಿನ್ನವಾಗಿ ಆಲೋಚಿಸುವ ಪ್ರಯತ್ನ ಇದಾಗಿದೆ. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ. ಮಂಡಗಳಲೆ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ರಾಮಚಂದ್ರ ಎಮ್.ಎಸ್. ಹಾಗೂ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರತಾಪ್ ದೊಡ್ಡಮನೆ ಇವರು ತಮ್ಮ ಸುದೀರ್ಘ ಶೈಕ್ಷಣಿಕ ಅನುಭವದ ಆಧಾರದ ಮೇಲೆ ವಿಜ್ಞಾನದ ವಿಸ್ಮಯವನ್ನು ವ್ಯಾಖ್ಯಾನಿಸಲಿದ್ದಾರೆ.

ಈ ಅಪರೂಪದ ಕಾರ್ಯಗಾರಕ್ಕೆ ಆಸಕ್ತ ಪ್ರೌಢಶಾಲಾ ಹಾಗೂ ಪಿಯು ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ.

ಭಾಗವಹಿಸಲು ಆಸಕ್ತರು ಈ ಕೆಳಗಿನ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ. 7618718791/ 9483942186

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.