logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಅಗಸ್ಟ್ 3: MCC ಬ್ಯಾಂಕಿನ 20ನೇ ಶಾಖೆ ಬೈಂದೂರಿನಲ್ಲಿ ಉದ್ಘಾಟನೆ.

ಟ್ರೆಂಡಿಂಗ್
share whatsappshare facebookshare telegram
1 Aug 2025
post image

ಮಂಗಳೂರು: ಕರ್ನಾಟಕದ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 113 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಎಮ್.ಸಿ.ಸಿ ಬ್ಯಾಂಕ್ ಲಿಮಿಟೆಡ್ 31 ಮಾರ್ಚ್ 2025 ರಂದು ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ ಎಲ್ಲಾ ವ್ಯವಹಾರ ಮಾಪನಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ.

ಕೇವಲ ಕರ್ನಾಟಕದ ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿದ್ದ ಬ್ಯಾಂಕಿನ ಕಾರ್ಯವ್ಯಾಪ್ತಿಯು ಪ್ರಸ್ತುತ ಆಡಳಿತ ಮಂಡಳಿ ವಹಿಸಿಕೊಂಡ ನಂತರ ಇಡೀ ಕರ್ನಾಟಕ ರಾಜ್ಯದ್ಯಂತ ವಿಸ್ತರಿಸಿದೆ.

ಎಮ್.ಸಿ.ಸಿ. ಬ್ಯಾಂಕ್ ಸಂಪೂರ್ಣವಾಗಿ ಕೋರ್ ಬ್ಯಾಂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇತರ ಖಾಸಗಿ ಮತ್ತು ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಲಭ್ಯವಿರುವ ಎಲ್ಲಾ ಸೇವೆ ಮತ್ತು ಸೌಲಭ್ಯಗಳು ಎಮ್.ಸಿ.ಸಿ. ಬ್ಯಾಂಕಿನಲ್ಲಿ ದೊರೆಯುತ್ತಿವೆ. ಬ್ಯಾಂಕ್ ಕರ್ನಾಟಕ ರಾಜ್ಯದಾದ್ಯಂತ ತನ್ನ ಶಾಖೆಗಳನ್ನು ವಿಸ್ತರಿಸುವ ಕಾರ್ಯಯೋಜನೆಯನ್ನು ಹಮ್ಮಿಕೊಂಡಿದೆ.

ಕರ್ನಾಟಕ ರಾಜ್ಯದ್ಯಾಂತ ಕಾರ್ಯವ್ಯಾಪ್ತಿ ಹೊಂದಿರುವ ಎಮ್.ಸಿ.ಸಿ. ಬ್ಯಾಂಕ್, ಮಂಗಳೂರಿನಲ್ಲಿ ನವೀಕೃತಗೊಂಡ ಸುಸಜ್ಜಿತ ಆಡಳಿತ ಕಛೇರಿಯೊಂದಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 19 ಶಾಖೆಗಳನ್ನು ಹೊಂದಿದೆ.

ಸಹಕಾರ ರತ್ನ ಅನಿಲ್ ಲೋಬೊರವರ ಆಡಳಿತ ಮಂಡಳಿಯು 2018ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು, 2018ರಿಂದ 2025ರ ವಿತ್ತೀಯ ವರ್ಷದಲ್ಲಿ ಅಭೂತಪೂರ್ವ ಪ್ರಗತಿಯನ್ನು ದಾಖಲಿಸಿದೆ. 2017ರಲ್ಲಿ ರೂ. 304 ಕೋಟಿ ಇದ್ದ ಬ್ಯಾಂಕಿನ ಠೇವಣಿಯು 2025ರಲ್ಲಿ ರೂ. 728 ಕೋಟಿಗೆ ತಲುಪಿದ್ದು, ಶೇಕಡಾ 139ರಷ್ಟು ಪ್ರಗತಿಯನ್ನು ದಾಖಲಿಸಿದೆ. ರೂ. 191 ಕೋಟಿ ಇದ್ದ ಸಾಲ ಮತ್ತು ಮುಂಗಡಗಳು ರೂ. 572 ಕೋಟಿಗೆ ತಲುಪಿದ್ದು, ಶೇಕಡಾ 199ರಷ್ಟು ಪ್ರಗತಿಯನ್ನು ದಾಖಲಿಸಿದೆ. ರೂ. 13 ಕೋಟಿ ಇದ್ದ ಪಾಲು ಬಂಡವಾಳ ರೂ. 33 ಕೋಟಿಗೆ ತಲುಪಿದ್ದು, ಶೇಕಡಾ 154ರಷ್ಟು ಪ್ರಗತಿಯನ್ನು ದಾಖಲಿಸಿದೆ. ಬ್ಯಾಂಕಿನ ರಿಸರ್ವ್ ರೂ. 29 ಕೋಟಿಯಿಂದ ರೂ. 79 ಕೋಟಿಗೆ ತಲುಪಿದ್ದು, ಶೇಕಡಾ 172ರಷ್ಟು ಪ್ರಗತಿಯನ್ನು ದಾಖಲಿಸಿದೆ. ರೂ. 496 ಕೋಟಿ ಇದ್ದ ವ್ಯವಹಾರ ರೂ. 1300 ಕೋಟಿಗೆ ತಲುಪಿದ್ದು, ಶೇಕಡಾ 162ರಷ್ಟು ಪ್ರಗತಿಯನ್ನು ದಾಖಲಿಸಿದೆ. ಶೇಕಡಾ 11.70 ಇದ್ದ ಬ್ಯಾಂಕಿನ ಅಖಂಖ CRAR (Capital to Risk Assets Ratio) ಪ್ರಮಾಣವು ಶೇಕಡಾ 19.82 ತಲುಪಿದ್ದು ಶೇಕಡಾ 62 ರಷ್ಟು ಪ್ರಗತಿಯನ್ನು ದಾಖಲಿಸಿದೆ. ಶೇಕಡಾ 0.56 ಇದ್ದ ಬ್ಯಾಂಕಿನ ರಿಟರ್ನ್ ಅನ್ ಅಸೆಟ್ಸ್ ಮೌಲ್ಯವು ಶೇಕಡಾ 1.40 ಗೆ ತಲುಪಿ ಶೇಕಡಾ 150 ಪ್ರಗತಿಯನ್ನು ದಾಖಲಿಸಿದೆ.

ಬ್ಯಾಂಕಿನ ಪ್ರಗತಿಯ ಬಗ್ಗೆ ವಿಶೇಷ ಕಾಳಜಿ ವಹಿಸುತ್ತಿರುವ ಸಮರ್ಥ ಆಡಳಿತ ಮಂಡಳಿ, ಅದಕ್ಕನುಗುಣವಾಗಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗದ ಶ್ರಮ ಹಾಗೂ ಬ್ಯಾಂಕಿನ ಆರ್ಥಿಕ ಪ್ರಗತಿಯತ್ತ ಗಮನಹರಿಸಿ ಕಾರ್ಯಯೋಜನೆಯನ್ನು ಹಮ್ಮಿಕೊಂಡಿರುವ ಕಾರಣ ಭಾರತೀಯ ರಿಸರ್ವ್ ಬ್ಯಾಂಕಿನ ಎಲ್ಲಾ ಮಾನದಂಡಗಳನ್ನು ಪೂರೈಸಿ ಎಮ್.ಸಿ.ಸಿ. ಬ್ಯಾಂಕ್ 22 ವರ್ಷಗಳ ನಂತರ ಬ್ರಹ್ಮಾವರ, ಬೆಳ್ತಂಗಡಿ ಮತ್ತು ಬೆಳ್ಮಣ್ನಲ್ಲಿ ಮೂರು ಶಾಖೆಗಳನ್ನು ತೆರೆದಿದ್ದು, ಶಾಖೆಗಳ ಒಟ್ಟು ಸಂಖ್ಯೆಯು 16ರಿಂದ 19ಕ್ಕೆ ತಲುಪಿದ್ದು, ಬೈಂದೂರಿನಲ್ಲಿ ತನ್ನ 20ನೇ ಶಾಖೆಯನ್ನು ದಿನಾಂಕ ಅಗಸ್ಟ್ 03, 2025ರಂದು ಉದ್ಘಾಟಿಸಲಿದೆ ಎಂದು ಎಮ್.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಜುಲೈ 30ರಂದು ಮಂಗಳೂರಿನ ಹಂಪನಕಟ್ಟ ಎಂಸಿಸಿ ಬ್ಯಾಂಕ್ ಪ್ರದಾನ ಕಛೇರಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.

ಹಾಗೆಯೇ ಅಕ್ತೋಬರ್ 5, 2025 ರಂದು 21ನೇ ಶಾಖೆಯನ್ನು ಸಂತೆಕಟ್ಟೆಯಲ್ಲಿ ತೆರೆಯಲಿದೆ ಎಂದು ಅವರು ತಿಳಿಸಿದರು.

ಬೈಂದೂರು ಶಾಖೆಯ ಉದ್ಘಾಟಣಾ ಕಾರ್ಯಕ್ರಮದಲ್ಲಿ ಎಮ್.ಸಿ.ಸಿ. ಬ್ಯಾಂಕ್ನ ಅಧ್ಯಕ್ಷ, ಸಹಕಾರ ರತ್ನ ಅನಿಲ್ ಲೋಬೊ ಅವರು ಅಧ್ಯಕ್ಷತೆ ವಹಿಸುವರು. ಬೈಂದೂರಿನ ಹೋಲಿ ಕ್ರಾಸ್ ಚರ್ಚ್ನ ಧರ್ಮಗುರುಗಳಾದ ವಂದನೀಯ ವಿನ್ಸೆಂಟ್ ಕುವೆಲ್ಹೊ ಶಾಖೆಯನ್ನು ಆಶೀರ್ವದಿಸಲಿದ್ದಾರೆ. ಬೈಂದೂರಿನ ಶಾಸಕ ಗುರುರಾಜ್ ಗಂಟಿಹೊಳೆ ಅವರು ಮುಖ್ಯ ಅತಿಥಿಯಾಗಿರಲಿದ್ದಾರೆ. ಶ್ರೀ ಮೂಕಾಂಬಿಕಾ ದೇವಸ್ಥಾನ, ಕೊಲ್ಲೂರಿನ ಆಡಳಿತ ಧರ್ಮದರ್ಶಿ ಬಾಬು ಶೆಟ್ಟಿ, ಬೈಂದೂರು ಸೇಂಟ್ ಥಾಮಸ್ ರೆಸಿಡೆನ್ಶಿಯಲ್ ಸ್ಕೂಲ್, ಇದರ ಪ್ರಾಂಶುಪಾಲ ವಂದನೀಯ ಫಿಲಿಪ್ ನೆಲಿವಿಲ್ಲ, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ರಾಜು ಪೂಜಾರಿ, ಬೈಂದೂರು ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯ ಸದಾಶಿವ ಡಿ. ಪಡುವರಿ, ಶಿರೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಕಾಪ್ಸಿ ನೂರ್ ಮೊಹಮ್ಮದ್, ನಾಡದೋಣಿ ರಾಜ್ಯ ಸಂಘದ ಅಧ್ಯಕ್ಷ ನಾಗೇಶ್ ಖಾರ್ವಿ, ಬೈಂದೂರಿನ ವಕೀಲರ ಸಂಘದ ಅಧ್ಯಕ್ಷ ಮೋಬಿ ಪಿ.ಸಿ. ಇವರು ಗೌರವ ಅತಿಥಿಗಳಾಗಲಿದ್ದಾರೆ.

ಇದರ ಜೊತೆಗೆ, ಅಗಸ್ಟ್ 09, 2025 ರಂದು ಬೆಳ್ಮಣ್ನಲ್ಲಿ 9ನೇ ಎಟಿಎಮ್, ಅಗಸ್ಟ್ 10, 2025ರಂದು ಸುರತ್ಕಲ್ನಲ್ಲಿ 10ನೇ ಎಟಿಎಮ್, ಅಗಸ್ಟ್ 17, 2025ರಂದು ಕುಲಶೇಖರ ಶಾಖೆಯನ್ನು ಸ್ವಂತ ಕಟ್ಟಡಕ್ಕೆ ಸ್ಥಳಾಂತರ ಮತ್ತು ಉದ್ಘಾಟನೆ ಹಾಗೂ 11ನೇ ಎಟಿಎಮ್ ಉದ್ಘಾಟನೆ, ಸೆಪ್ಟೆಂಬರ್ 14, 2025ರಂದು ಕಿನ್ನಿಗೋಳಿಯಲ್ಲಿ 12ನೇ ಎಟಿಎಮ್, ಸೆಪ್ಟೆಂಬರ್ 27,‌ 2025ರಂದು ಉಡುಪಿ ಶಾಖೆಯಲ್ಲಿ 13ನೇ ಎಟಿಎಮ್, ಮತ್ತು ಅಕ್ಟೋಬರ್ 05, 2025ರಂದು 14ನೇ ಎಟಿಎಮ್ ಸಂತೆಕಟ್ಟೆಯಲ್ಲಿ ಉದ್ಘಾಟನೆಗೊಳ್ಳಲಿದೆ.

ಗ್ರಾಹಕರಿಗೆ ವಿವಿಧ ಸಾಲ ಸೌಲಭ್ಯ:

ಪ್ರಸ್ತುತ ಬ್ಯಾಂಕಿನಲ್ಲಿ ಗ್ರಾಹಕರಿಗೆ ಕಡಿಮೆ ಬಾಡಿಗೆ ದರದಲ್ಲಿ ಲಾಕರ್ ಸೌಲಭ್ಯ, ಸ್ಪರ್ಧಾತ್ಮಕ ಬಡ್ದಿ ದರದಲ್ಲಿ ದೇಶ ವಿದೇಶ ವಿಧ್ಯಾ ಭವಿಷ್ಯ ಶಿಕ್ಷಣ ಸಾಲ, ಎಮ್.ಎಸ್.ಎಮ್.ಇ ವ್ಯವಹಾರ ಸಾಲ, ವಾಹನ ಸಾಲ, ವಸತಿ ಸಾಲ, ಮನೆ ಖರೀದಿ, ದುರಸ್ತಿ, ಮದುವೆ, ಗ್ರಹ ಉಪಯೋಗಿ ವಸ್ತು ಖರೀದಿ ಸಾಲವನ್ನು ತ್ವರಿತವಾಗಿ ನೀಡುತ್ತಿದೆ. ಸೇವಾ ಶುಲ್ಕವಿಲ್ಲದೆ ಚಿನ್ನಾಭರಣ ಸಾಲವನ್ನು ನೀಡುತ್ತಿದೆ. ಎಟಿಎಮ್ ಮತ್ತು ಮೊಬೈಲ್ ಬ್ಯಾಂಕಿಂಗ್ ಸೌಲಭ್ಯವನ್ನು ಉಚಿತವಾಗಿ ನೀಡುತ್ತಿದೆ. ಬ್ಯಾಂಕಿನಲ್ಲಿರುವ ಠೇವಣಿಗಳಿಗೆ ಖಾಸಗಿ ಮತ್ತು ವಾಣಿಜ್ಯ ಬ್ಯಾಂಕುಗಳಂತೆಯೇ ಭಾರತೀಯ ರಿಸರ್ವ್ ಬ್ಯಾಂಕಿನ ಡಿಪಾಜಿಟ್ ಇನ್ಸೂರೆನ್ಸ್ ಆ್ಯಂಡ್ ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಶನ್ನಿಂದ (DICGC) ವಿಮಾ ಸೌಲಭ್ಯವಿದೆ ಎಂದು ತಿಳಿಸಿದರು.

ಎಂಸಿಸಿ ಬ್ಯಾಂಕ್ ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿ’ಸಿಲ್ವಾ, ನಿರ್ದೇಶಕರು ಆಂಡ್ರ್ಯೂ ಡಿಸೋಜಾ, ಡಾ. ಜೆರಾಲ್ಡ್ ಪಿಂಟೊ, ಅನಿಲ್ ಪತ್ರಾವೊ, ಜೆ.ಪಿ. ರೊಡ್ರಿಗಸ್, ಡೇವಿಡ್ ಡಿಸೋಜಾ, ಎಲ್ರಾಯ್ ಕಿರಣ್ ಕ್ರಾಸ್ಟೊ, ಹೆರಾಲ್ಡ್ ಮೊಂತೇರೊ, ರೋಶನ್ ಡಿಸೋಜಾ, ಮೆಲ್ವಿನ್ ವಾಸ್, ವಿನ್ಸೆಂಟ್ ಲಸ್ರಾದೊ, ಸಿ.ಜಿ. ಪಿಂಟೊ, ಸುಶಾಂತ್ ಸಲ್ಡಾನ್ಹಾ, ಐರಿನ್ ರೆಬೆಲ್ಲೊ, ಡಾ. ಫ್ರೀಡಾ ಡಿಸೋಜಾ, ಆಲ್ವಿನ್ ಮೊಂತೇರೊ, ಫೆಲಿಕ್ಸ್ ಡಿ'ಕ್ರೂಜ್, ಶರ್ಮಿಳಾ ಮಿನೇಜಸ್ ಮತ್ತು ಮಹಾಪ್ರಬಂಧಕರು ಸುನಿಲ್ ಮಿನೇಜಸ್ ಉಪಸ್ಥಿತರಿದ್ದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.