logo
WhatsApp Image 2026-04-02 at 14.46.04.jpeg
hindalco everlast.jpeg

ಜುಲೈ 27ರಂದು ಆಟೋ, ಕ್ಯಾಬ್, ಖಾಸಗಿ ಬಸ್ ಸಂಚಾರ ಬಂದ್

ಟ್ರೆಂಡಿಂಗ್
share whatsappshare facebookshare telegram
20 Jul 2023
post image

ಬೆಂಗಳೂರು: ಜು.27 ರಂದು ಆಟೋ, ಕ್ಯಾಬ್ ಹಾಗೂ ಖಾಸಗಿ ಬಸ್‍ಗಳ ಮಾಲೀಕರು ಹಾಗೂ ಚಾಲಕರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ.

ಇದರಿಂದಾಗಿ ಜು.26ರ ಮಧ್ಯರಾತ್ರಿ 12 ರಿಂದ 27ರ ಮಧ್ಯರಾತ್ರಿಯ ವರೆಗೂ ರಾಜ್ಯಾದ್ಯಂತ ಆಟೋ, ಕ್ಯಾಬ್ ಹಾಗೂ ಖಾಸಗಿ ಬಸ್‍ಗಳು ಸಾರ್ವಜನಿಕರಿಗೆ ಲಭ್ಯವಿರುವುದಿಲ್ಲ.

ರಾಜ್ಯ ಸರ್ಕಾರದ ಕೆಲವು ನೀತಿಗಳಿಂದ ಖಾಸಗಿ ಸಾರಿಗೆಗೆ ನಷ್ಟವಾಗುತ್ತಿದೆ. ಈ ಬಗ್ಗೆ ಸರ್ಕಾರವನ್ನು ಎಚ್ಚರಿಸಲು ಖಾಸಗಿ ಸಾರಿಗೆ ವಾಹನಗಳ ಮಾಲೀಕರು ಹಾಗೂ ಚಾಲಕರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಶಕ್ತಿ ಯೋಜನೆ, ವೈಟ್ ಬೋರ್ಡ್ ವಾಹನವನ್ನ ವಾಣಿಜ್ಯ ವಾಹನವಾಗಿ ಉಪಯೋಗಿಸುತ್ತಿರುವುದು, ದ್ವಿಚಕ್ರ ವಾಹನಗಳಿಗೆ ಮುಕ್ತ ಪರವಾನಿಗೆ ನೀಡುತ್ತಿರುವುದು ಸೇರಿದಂತೆ ಹಲವು ಯೋಜನೆಗಳಿಂದ ಖಾಸಗಿ ಸಾರಿಗೆ ನೆಲ ಕಚ್ಚಿ ಹೋಗಿದೆ ಎಂದು ಖಾಸಗಿ ಸಾರಿಗೆ ಮಾಲೀಕರು ಆರೋಪಿಸಿದ್ದಾರೆ

ಸರ್ಕಾರದ ಈ ನೀತಿಗಳಿಂದ ಆಟೋ, ಕ್ಯಾಬ್ ಹಾಗೂ ಖಾಸಗಿ ಬಸ್ ಚಾಲಕರು ಸಾಲ, ವಿಮೆ ಕಟ್ಟಲು ಮತ್ತು ಜೀವನ ಸಾಗಿಸಲು ಕಷ್ಟಪಡುವಂತಾಗಿದೆ. ಇದರಿಂದ ರಾಜ್ಯದ 23 ಸಾರಿಗೆ ಸಂಘಟನೆಗಳು ಸೇರಿ ಪ್ರತಿಭಟನೆಗೆ ಮುಂದಾಗುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.