

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೋ ರಿಕ್ಷಾ ಪ್ರಯಾಣ ದರವನ್ನು ಪರಿಷ್ಕರಿಸಲಾಗಿದ್ದು, ಮೊದಲ 1.5 ಕಿ.ಮೀ.ಗೆ ಕನಿಷ್ಠ ₹40 ದರ ನಿಗದಿಪಡಿಸಲಾಗಿದೆ. ಈ ದರದಲ್ಲಿ ಗರಿಷ್ಠ ಮೂವರು ಪ್ರಯಾಣಿಕರು ಸಂಚರಿಸಲು ಅವಕಾಶವಿದೆ.
ಪರಿಷ್ಕೃತ ದರದಂತೆ, ಮೊದಲ 1.5 ಕಿ.ಮೀ. ಬಳಿಕ ಪ್ರತಿ ಕಿ.ಮೀ.ಗೆ ₹20 ಪಾವತಿಸಬೇಕು. ಈ ದರವೂ ಗರಿಷ್ಠ ಮೂವರು ಪ್ರಯಾಣಿಕರಿಗೆ ಅನ್ವಯವಾಗಲಿದೆ.
ಆಟೋ ಕಾಯುವಿಕೆಗೆ ಮೊದಲ 10 ನಿಮಿಷ ಉಚಿತವಾಗಿದ್ದು, ಬಳಿಕ ಪ್ರತಿ 15 ನಿಮಿಷ ಅಥವಾ ಅದರ ಭಾಗಕ್ಕೆ ₹5 ಶುಲ್ಕ ವಿಧಿಸಬಹುದಾಗಿದೆ.
ರಾತ್ರಿ 10ರಿಂದ ಬೆಳಿಗ್ಗೆ 5ರವರೆಗೆ ಮಾತ್ರ ಸಾಮಾನ್ಯ ದರದ 1.5 ಪಟ್ಟು ಶುಲ್ಕ ವಸೂಲಿ ಮಾಡಲು ಅವಕಾಶ ನೀಡಲಾಗಿದೆ. ಪರಿಷ್ಕೃತ ದರಗಳು ಆಟೋ ಚಾಲಕರು ಹಾಗೂ ಪ್ರಯಾಣಿಕರಿಗೆ ಅನ್ವಯವಾಗಲಿದ್ದು, ನಿಗದಿತ ದರಕ್ಕಿಂತ ಹೆಚ್ಚಿನ ಮೊತ್ತವನ್ನು ವಸೂಲಿ ಮಾಡುವಂತಿಲ್ಲ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.