



ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ 9 ಮಂದಿ ಸಾಧಕಿಯರಿಗೆ ಸಾವಿತ್ರಿ ಸತ್ಯವಾನ್ ಸಾಧಕ ಮಹಿಳೆ-2023 ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ ಎಂದು ಸಾವಿತ್ರಿ ಸತ್ಯವಾನ್ ಟ್ರಸ್ಟ್ (ರಿ.) ನ ಸಂಸ್ಥಾಪಕಿ ಡಾ.ಮಮತಾ ಹೆಗ್ಡೆ ತಿಳಿಸಿದ್ದಾರೆ.
ಶಿಕ್ಷಕಿ ಪೂರ್ಣಿಮಾ ಶೆಣೈ,ಸಾಹಿತಿ ಚೈತ್ರಾ ಕಬ್ಬಿನಾಲೆ,ನಾಟಿ ವೈದ್ಯೆ ಜಯಂತಿ ಮಾಳ,ವಿಜೇತ ವಿಶೇಷ ಶಾಲೆಯ ಸಂಸ್ಥಾಪಕಿ ಡಾ.ಕಾಂತಿ ಹರೀಶ್,ಕೃಷಿ ಕ್ಷೇತ್ರದ ಸಾಧಕಿ ಸುಮಲತಾ ಮಾಳ,ಸಂಗೀತ ಕ್ಷೇತದ ಸಾಧಕಿ ಆರತಿ,ಸಮಾಜ ಸೇವಕಿ ಗಾಯತ್ರಿ ಪ್ರಭು,ಸುರಕ್ಷಾ ಸೇವಾಶ್ರಮದ ಆಯೇಷಾ ಭಾನು,ಶಿಕ್ಷಕಿ ಗೀತಾ ಎಸ್ ಹೆಗ್ಡೆ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಮಾರ್ಚ್ 12 ರವಿವಾರದಂದು ಹೆಬ್ರಿಯ ಚೈತನ್ಯ ಸಭಾಭವನದಲ್ಲಿ ಸಂಜೆ 4 ಗಂಟೆಗೆ ನಡೆಯಲಿದೆ.ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.