logo
WhatsApp Image 2026-04-02 at 14.46.04.jpeg
hindalco everlast.jpeg

ಅರಿವು ಸಾಲ ಯೋಜನೆ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
11 May 2026
post image

ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ/ನೀಟ್‌ನಲ್ಲಿ ಎಂಬಿಬಿಎಸ್, ಬಿಡಿಎಸ್, ಬಿಇ/ಬಿಟೆಕ್, ಬ್ಯಾಚ್ಯುಲರ್ ಆಫ್ ಆರ್ಕಿಟೆಕ್ಚರ್, ಬಿ.ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ಕೋರ್ಸ್ಗಳಿಗೆ ಆಯ್ಕೆಯಾಗುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ(ಕ್ರಿಶ್ಚಿಯನ್ ಹೊರತುಪಡಿಸಿ) ಅರಿವು ಶೈಕ್ಷಣಿಕ ಸಾಲ ಯೋಜನೆಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಯಡಿಯಲ್ಲಿ ಸಾಲ ಪಡೆಯಲು ಬಯಸುವ ವಿದ್ಯಾರ್ಥಿಗಳು kmdconline.karnataka.gov.in ವೆಬ್‌ಸೈಟ್ ಮೂಲಕ ಮೇ. 3ರೊಳಗಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳನ್ನು ಜೂನ್ 1ರೊಳಗೆ ಜಿಲ್ಲಾ ವ್ಯವಸ್ಥಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ಮೌಲಾನಾ ಆಜಾದ್ ಭವನ, 1 ನೇ ಮಹಡಿ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಮಣಿಪಾಲ ಇಲ್ಲಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ: 0820-2574990 ಅಥವಾ ತಾಲೂಕು ಮಾಹಿತಿ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಕಚೇರಿ ಪ್ರಕಟಣೆ ತಿಳಿಸಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.