logo
WhatsApp Image 2026-04-02 at 14.46.04.jpeg
hindalco everlast.jpeg

ಗ್ರಾಹಕರ ಹಕ್ಕುಗಳ ಬಗ್ಗೆ ಜಾಗೃತಿ ಅಗತ್ಯ: ನಗರದಲ್ಲಿ ಯು-ಆ್ಯಕ್ಟ್ ಉದ್ಘಾಟಿಸಿ ನ್ಯಾಯಾಧೀಶ ಶಾಂತವೀರ ಶಿವಪ್ಪ ಅಭಿಮತ

ಟ್ರೆಂಡಿಂಗ್
share whatsappshare facebookshare telegram
12 Jun 2022
post image

ಉಡುಪಿ:

ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಮತ್ತು ಗ್ರಾಹಕರ ಹಕ್ಕುಗಳ ಬಗ್ಗೆ ಜಾಗೃತಿ ಅಗತ್ಯ ಬೇಕಾಗಿರುತ್ತದೆ. ಆ ನಿಟ್ಟಿನಲ್ಲಿ ಗ್ರಾಹಕರಿಗೆ ಅವರ ಹಕ್ಕುಗಳ ಬಗ್ಗೆ ತಿಳುವಳಿಕೆ ನೀಡುವುದು ಉತ್ತಮ ಕಾರ್ಯವಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಹೇಳಿದ್ದಾರೆ.

ಯು-ಆ್ಯಕ್ಟ್ (ಉಡುಪಿ-ಅಡ್ವೊಕೆಸಿ ಆಫ್ ಕನ್ಸ್ಯೂಮರ್ಸ್ ಆ್ಯಂಡ್ ಸಿಟಿಜನ್ಸ್) ವೇದಿಕೆಯನ್ನು ಭಾನುವಾರ ನಗರದ ಆಶಾಚಂದ್ರ ಟ್ರೇಡ್ ಸೆಂಟರ್ ಉನ್ನತಿ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಉಡುಪಿ ವಕೀಲರ ಸಂಘದ ಅಧ್ಯಕ್ಷ ಬಿ.ನಾಗರಾಜ್, ಹಿರಿಯ ನ್ಯಾಯವಾದಿ ಸಿ.ವಿಜಯ್ ಹೆಗ್ಡೆ, ಕಾರ್ಕಳ ವಕೀಲರ ಸಂಘದ ಅಧ್ಯಕ್ಷ ಸುನಿಲ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಉಪಸ್ಥಿತರಿದ್ದರು. ನ್ಯಾಯವಾದಿ ಹಾಗೂ ಯು ಆ್ಯಕ್ಟ್ ಅಧ್ಯಕ್ಷ ಪ್ರೇಮ್ ಪ್ರಸಾದ್ ಶೆಟ್ಟಿ ಪ್ರಸ್ತಾವಿಕವಾಗಿ ಮಾತನಾಡಿದರು. ವಿಜಯ್ ಡಿಸೋಜ ಸ್ವಾಗತಿಸಿದರು. ಮಾಧವ ಕಾಮತ್ ವಂದಿಸಿದರು. ರಾಯನ್ ಫೆರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿದರು

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.