logo
WhatsApp Image 2026-04-02 at 14.46.04.jpeg
hindalco everlast.jpeg

ಕನ್ನಡದ ‘ಅಭಿನಯ ಸರಸ್ವತಿ’ ಬಿ.ಸರೋಜಾದೇವಿ ವಿಧಿವಶ

ಟ್ರೆಂಡಿಂಗ್
share whatsappshare facebookshare telegram
14 Jul 2025
post image

ಬೆಂಗಳೂರು: ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ (87) ಅವರು ಇಂದು (ಜುಲೈ14) ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಯಶವಂತಪುರದಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಬಿ.ಸರೋಜಾದೇವಿ ಅವರು ಕನ್ನಡ ಚಿತ್ರರಂಗದ ಪ್ರಮುಖ ನಟಿ. ಅವರನ್ನು ‘ಅಭಿನಯ ಸರಸ್ವತಿ’ ಎಂದು ಕರೆಯಲಾಗುತ್ತಿತ್ತು. ಅವರು ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗಗಳಲ್ಲಿ ಹೆಸರುವಾಸಿಯಾಗಿದ್ದರು. ಅವರು 1955 ರಿಂದ 1984 ರವರೆಗೆ ಸತತವಾಗಿ 161 ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದರು.

ಪದ್ಮಶ್ರೀ ಪ್ರಶಸ್ತಿ, ಪದ್ಮಭೂಷಣ ಪ್ರಶಸ್ತಿ ಗೌರವ: ಸರೋಜಾದೇವಿ ಅವರು 1969ರಲ್ಲಿ ಪದ್ಮಶ್ರೀ ಪ್ರಶಸ್ತಿ ಮತ್ತು 1992ರಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು. ಅವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಮತ್ತು ತಮಿಳುನಾಡಿನಿಂದ ಕಲೈಮಾಮಣಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು.

ಕನ್ನಡ ಚಲನಚಿತ್ರರಂಗಕ್ಕೆ ಅಪಾರ ಕೊಡುಗೆ: ಸರೋಜಾದೇವಿ ಅವರು ಕನ್ನಡ ಚಲನಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ ಮಹಾನ್ ನಟಿ. ಮಹಾಕವಿ ಕಾಳಿದಾಸ, ಕಿತ್ತೂರು ಚೆನ್ನಮ್ಮ, ಅಣ್ಣಾ ತಮ್ಮ, ಭಕ್ತ ಕನಕದಾಸ, ಬಾಳೇ ಬಂಗಾರ, ನಾಗಕನ್ಯೆ, ಬೆಟ್ಟದ ಹೂವು, ಕಸ್ತೂರಿ ನಿವಾಸ ಸೇರಿದಂತೆ ಅನೇಕ ಕನ್ನಡ ಚಿತ್ರಗಳಲ್ಲಿ ನಟಿಸಿದ್ದರು. ನಾಡೋಡಿ ಮನ್ನನ್, ಕರ್ಪೂರ ಕರಸಿ, ಪಾಂಡುರಂಗ ಮಹಾತ್ಯಂ, ತಿರುಮಣಂ ತಮಿಳು ಚಿತ್ರಗಳಲ್ಲಿ ಅಭಿನಯಿಸಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.