



ಉಡುಪಿ: ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ದೃಶ್ಯಕಲೆಯಲ್ಲಿ ಪ್ರಥಮ ಬಿ.ವಿ.ಎ (ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್) ಪದವಿ ಪ್ರವೇಶಾತಿಗಾಗಿ, ದ್ವಿತೀಯ ಪಿ.ಯು.ಸಿ. ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್https://uucms.karnataka.gov.in ಅಥವಾ https://uucms.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಸದರಿ ಪದವಿಯಲ್ಲಿ 3 ನೇ ಸೆಮಿಸ್ಟರ್‌ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.ಅರ್ಜಿ ಸಲ್ಲಿಸಲು ಜೂನ್ 10 ಕೊನೆಯ ದಿನ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆಯ ದಿನಾಂಕ ಮತ್ತು ಇತರೆ ಮಾಹಿತಿಯನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 0821-2438931 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.