logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಒಮಿಕ್ರಾನ್ ಕೊರೊನ ಹಿನ್ನೆಲೆ : ರಾಜ್ಯದಾದ್ಯಂತ ತುರ್ತು ಕ್ರಮಗಳಿಗೆ ಸೂಚನೆ ! ಸರಕಾರ ನಮೂದಿಸಿದ ತುರ್ತು ಕ್ರಮಗಳೇನು ಇಲ್ಲಿದೆ ಸಂಪೂರ್ಣ ಡಿಟೆಲ್ಸ್

ಟ್ರೆಂಡಿಂಗ್
share whatsappshare facebookshare telegram
27 Nov 2021
post image

ಬೆಂಗಳೂರು: ರಾಜ್ಯಸರಕಾರ ಕೊರೋನ ಒಮೀಕ್ರಾನ್ ಹಿನ್ನಲೆಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಿಬಿಎಂಪಿ ಸಹಿತ ಬೆಂಗಳೂರು ನಗರ ಜಿಲ್ಲೆ, ಧಾರವಾಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ , ಕೊಡಗು, ಮೈಸೂರು ಸೇರಿ ಏಳು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೊ ಸಂವಾದ ನಡೆಸಿದರು.

ಸಚಿವರಾದ ಆರ್.ಅಶೋಕ್, ಡಾ. ಸಿ.ಎನ್.ಅಶ್ವತ್ಥನಾರಾಯಣ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್, ಆರೋಗ್ಯ ಇಲಾಖೆ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್, ಆಯುಕ್ತ ರಂದೀಪ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಕೈಗೊಂಡ ಪ್ರಮುಖ ತೀರ್ಮಾನಗಳು

ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿಗಿ ವಿಚಕ್ಷಣೆ ಕೈಗೊಳ್ಳುವುದು ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯ ಪ್ರವೇಶಿಸುವವರಿಗೆ ಆರ್.ಟಿ.ಪಿ.ಸಿ.ಆರ್. ನೆಗೆಟಿವ್ ರಿಪೋರ್ಟ್ ಕಡ್ಡಾಯ. ಗಡಿ ಜಿಲ್ಲೆಗಳಲ್ಲಿ ಮೂರು ಶಿಫ್ಟ್ ಗಳಲ್ಲಿ ಕೆಲಸ ಮಾಡುವಂತೆ ಡಿಸಿಗಳಿಗೆ ಸೂಚನೆ. ಇದಕ್ಕೆ ಎಲ್ಲ ಇಲಾಖೆಗಳ ಸಹಕಾರ ಪಡೆಯುವುದು. 16 ದಿನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್. ಪರೀಕ್ಷೆ ಮಾಡಿಸಬೇಕು. ಹಾಸ್ಟೆಲ್ ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೆಗಟಿವ್ ರಿಪೋರ್ಟ್ ಬಂದ ನಂತರದ 7ನೇ ದಿನಕ್ಕೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್. ಪರೀಕ್ಷೆ ಮಾಡುವುದು. ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರನ್ನು ಕಡ್ಡಾಯವಾಗಿ ಪರೀಕ್ಷೆಗೊಳಪಡಿಸಬೇಕು. ಹೊಟೇಲ್, ರೆಸ್ಟೋರೆಂಟ್‌ಗಳು, ಸಿನಿಮಾ ಹಾಲ್‌ಗಳು, ಈಜುಗೊಳ, ಸಾರ್ವಜನಿಕ ಗ್ರಂಥಾಲಯ, ಮೃಗಾಲಯಗಳು ಮತ್ತು ಜೈವಿಕ ಉದ್ಯಾನವನಗಳು, ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಪಡೆದಿರಬೇಕು. ವೈದ್ಯಕೀಯ ಕಾಲೇಜು ಮತ್ತು ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸುವುದು. ಸರಕಾರಿ ಕಚೇರಿಗಳಲ್ಲಿ ಹಾಗೂ ಮಾಲ್‌ಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆಯಬೇಕು. ಸರಕಾರಿ ಕಚೇರಿ ಹಾಗೂ ಮಾಲ್‌ಗಳಲ್ಲಿಯೇ ಲಸಿಕೆ ನೀಡಲು ವ್ಯವಸ್ಥೆ ಕಲ್ಪಿಸುವುದು. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆಗಳನ್ನು ತೀವ್ರಗೊಳಿಸುವುದು. ನೆಗಟಿವ್ ಇದ್ದವರಿಗೆ ನಗರ ಪ್ರವೇಶಕ್ಕೆ ಅನುಮತಿ. ಕೋವಿಡ್ ಪಾಸಿಟಿವ್ ಇದ್ದವರಿಗೆ ಚಿಕಿತ್ಸೆಗೆ ಆಸ್ಪತ್ರೆಗೆ ಕಳುಹಿಸುವುದು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.