



ಬೆಂಗಳೂರು; ಪಠ್ಯ ಪೂರ್ಣಗೊಳಿಸಲು ಭಾನುವಾರವೂ ಶಾಲೆ ನಡೆಸಲಾಗುವುದು ಎಂದು ಹೇಳಲಾಗಿತ್ತು. ಆದರೆ, ಪಠ್ಯ ಕಡಿತಗೊಳಿಸುವುದಿಲ್ಲ ಮತ್ತು ಭಾನುವಾರ ಶಾಲೆ ಇರುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ. ಭಾನುವಾರ ಪೋಷಕರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ರಜೆಯನ್ನು ಪಠ್ಯ ಕಡಿತ ಮಾಡುವುದು ಬೇಡವೆಂದು ಶಿಕ್ಷಕರು ಸಲಹೆ ನೀಡಿದ್ದಾರೆ.
ಹೀಗಾಗಿ ಸದ್ಯಕ್ಕೆ ಪಠ್ಯ ಕಡಿತ ಮಾಡದಿರಲು ತೀರ್ಮಾನಿಸಲಾಗಿದೆ. ಪೂರ್ಣ ಪಠ್ಯ ಬೋಧನೆ ಮಾಡಲಾಗುವುದು. ಆದರೆ, ಸಮಯವಿರುವುದರಿಂದ ಪಠ್ಯ ಪೂರ್ಣಗೊಳಿಸಲು ಭಾನುವಾರವೂ ರಜೆ ರದ್ದುಗೊಳಿಸಿ ತರಗತಿ ನಡೆಸುವ ಆಲೋಚನೆ ಇಲ್ಲ. ಶನಿವಾರ ಅರ್ಧದಿನ ಮತ್ತು ಭಾನುವಾರ ಶಾಲೆಗಳಿಗೆ ರಜೆ ಇರುತ್ತದೆ. ಇರುವ ಅವಧಿಯಲ್ಲಿ ಪಠ್ಯ ಪೂರ್ಣಗೊಳಿವುದಾಗಿಶಿಕ್ಷಕರು ಹೇಳಿದ್ದಾರೆ. ಮುಂದಿನ ವರ್ಷಗಳಲ್ಲಿ ಸಮಸ್ಯೆಯಾಗುತ್ತದೆ ಎಂಬ ಕಾರಣಕ್ಕೆ ಪಠ್ಯ ಕಡಿತಗೊಳಿಸದೇ ಪೂರ್ಣಪಠ್ಯ ಬೋಧನೆ ಮಾಡಲಾಗುವುದು ಎಂದಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.