



ಬೆಂಗಳೂರು: ದೇಶದಲ್ಲಿ ಏರಿಕೆ ಯಾಗುತ್ತಿರುವ ಮಂಕಿ ಫಾಕ್ಸ್ ಬಗ್ಗೆ ರಾಜ್ಯ ಸರ್ಕಾರ ಎಚ್ಚೆತ್ತಿದ್ದು ಮಾರ್ಗಸೂಚಿ ಗಳನ್ನು ಹೊರಡಿಸಲಾಗಿದೆ. ಪ್ರಮುಖ ಅಂಶಗಳು ಹೀಗಿವೆ
ಮಂಕಿಪಾಕ್ಸ್ ಪ್ರತಿಯೊಂದು ಪ್ರಕರಣವನ್ನು ವರದಿಯಾಡುವುದು
ತ್ವರಿತ ಪ್ರಕ್ರಿಯಾತಂಡದ ವಿವರವಾದ ತನಿಖೆ, ಮಾದರಿ ಸಂಗ್ರಹ ಮತ್ತು ಐಹೆಚ್‌ಐಪಿ ಪೋರ್ಟಲ್ ನಲ್ಲಿ ವರದಿ ಮಾಡಿದ ನಂತ್ರ ವರದಿ ಮಾಡತಕ್ಕದ್ದು
ಪ್ರಕರಣ ವರದಿ ಮಾಡುವಪತ್ರವನ್ನು ಸಂಪೂರ್ಣ ಭರ್ತಿ ಮಾಡಲಾಗಿದೆ ಎಂಬುದನ್ನು ಖಾತರಿ ಪಡಿಸಿಕೊಳ್ಳುವುದು.
ಶಂಕಿತ ಹಾಗೂ ಖಚಿತಪಟ್ಟ ಪ್ರಕರಣಗಳಿಗಾಗಿ ನಿರ್ದಿಷ್ಟ ಸಾಂಸ್ಥಿಕ ಪ್ರತ್ಯೇಕತೆ ಸೌಲಭ್ಯವಿರುವುದನ್ನು ಖಚಿತ ಪಡಿಸಿಕೊಳ್ಳುವುದು.
ಎಲ್ಲಾ ಶಂಕಿತ ಪ್ರಕರಣಗಳ ಸಂಪರ್ಕಿತರ ಪತ್ತೆಯನ್ನು ಕಡ್ಡಾಯವಾಗಿ ಕೈಗೊಳ್ಳುವುದು.
ಸಂಪರ್ಕಿತರನ್ನು ಲಕ್ಷಣಗಳು, ಚಿನ್ಹೆಗಳು ಕಂಡು ಬರುವವೆ ಎಂದು 21 ದಿನಗಳವರೆಗೆ ಮೇಲ್ವಿಚಾರಣೆ ಮಾಡುವುದು . ಮಂಕಿಪಾಕ್ಸ್ ನ ಲಕ್ಷಣಗಳು, ಚಿನ್ಹೆಗಳು ಕಂಡು ಬಂದರೇ, ಕೂಡಲೇ ಪರೀಕ್ಷೆಗೊಳಪಡಿಸುವುದು ಹಾಗೂ ಮಾದರಿ ಸಂಗ್ರಹಿಸಿ ಪರೀಕ್ಷೆಗಾಗಿ ಪ್ರಯೋಗಶಾಲೆಗೆ ಕಳುಹಿಸಿಕೊಡಬೇಕು ಎಂದು ಮಾರ್ಗಸೂಚಿ ಯಲ್ಲಿ ತಿಳಿಸಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.