



ಬೆಂಗಳೂರು : ಅ.13 ರ ಇಂದಿನಿಂದಲೇ ಆಟೋ, ಕ್ಯಾಬ್ ಚಾಲಕರಿಗೆ ಬ್ಯಾಡ್ಜ್ ಕಡ್ಡಾಯ ಮಾಡಲಾಗಿದ್ದು, ರಾಜ್ಯದ ಎಲ್ಲ ಆರ್ ಟಿಒ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಬ್ಯಾಡ್ಜ್ ಇಲ್ಲದವರು, ಅವಧಿ ಮುಕ್ತಾಯಗೊಂಡಿರುವವರು ಬ್ಯಾಡ್ಜ್ ಪಡೆಯಬೇಕಾಗುತ್ತದೆ. ಬಾಡ್ಜ್ ಸಂಖ್ಯೆ ಪಡೆಯಲು ತಂತ್ರಾಂಶದಲ್ಲಿ ಸಾರಿಗೆ ಇಲಾಖೆ ಅವಕಾಶ ಕಲ್ಪಿಸಿದೆ ಎಂದು ಆಯುಕ್ತರು ಹೇಳಿದ್ದಾರೆ.ಲಘು ಮೋಟಾರು ವಾಹನಗಳ ಡಿಎಲ್ ಪಡೆದವರು ಆಟೋ ರಿಕ್ಷಾವನ್ನೂ ಚಲಾಯಿಸಬಹುದು ಎಂದು ಕರ್ನಾಟಕ ಮೋಟಾರು ವಾಹನ ಕಾಯ್ದೆಯಲ್ಲಿ ಅವಕಾಶ ನೀಡಲಾಗಿದೆ. ಹೀಗಾಗಿ ಆಟೋರಿಕ್ಷಾ ಚಾಲಕರಿಗೆ ಬ್ಯಾಡ್ಜ್ ಕಡ್ಡಾಯ ನಿಯಮವನ್ನು ತೆಗೆಯಲಾಗಿತ್ತು. ಆದರೆ ಇದೀಗ ಮತ್ತೆ ನಿಯಮ ಜಾರಿಗೆ ತರಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.