logo
WhatsApp Image 2026-04-02 at 14.46.04.jpeg
hindalco everlast.jpeg

ಲೋಕಸಭಾ ಚುನಾವಣೆ ಹಿನ್ನೆಲೆ ಮದ್ಯ ಮಾರಾಟ ನಿಷೇಧ..!

ಟ್ರೆಂಡಿಂಗ್
share whatsappshare facebookshare telegram
26 Mar 2024
post image

ಉಡುಪಿ: ಶಿವಮೊಗ್ಗ-ಉಡುಪಿ ಲೋಕಸಭಾ ಕ್ಷೇತ್ರದ ಚುನಾವಣೆ-2024 ರ ಹಿನ್ನೆಲೆ, ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮೇ 7 ರಂದು ಮತದಾನ ನಡೆಸಲು ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದೆ. ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಶಾಂತಿಪಾಲನೆ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಕರ್ನಾಟಕ ಅಬಕಾರಿ ಕಾಯ್ದೆ ಸಾಮಾನ್ಯ ನಿಯಮಾವಳಿ 1967 ಕಲಂ 10(ಬಿ) ರಂತೆ ಹಾಗೂ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951 ರ ಕಲಂ135(ಸಿ) ರ ಪ್ರಕಾರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಮೇ 5 ರ ಸಂಜೆ 5 ಗಂಟೆಯಿ೦ದ ಮೇ 7 ರ ಮಧ್ಯರಾತ್ರಿ 12 ರ ವರೆಗೆ ಕುಂದಾಪುರ ಹಾಗೂ ಬೈಂದೂರು ತಾಲೂಕು ವ್ಯಾಪ್ತಿಯ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು, ಮದ್ಯಮಾರಾಟ ಡಿಪೋಗಳನ್ನು, ಮದ್ಯ ತಯಾರಿಕಾ ಡಿಸ್ಟಿಲರಿಗಳನ್ನು. ಸ್ಟಾರ್ ಹೋಟೆಲ್‌ಗಳನ್ನು, ಶೇಂದಿ ಅಂಗಡಿಗಳನ್ನು ಹಾಗೂ ಕ್ಲಬ್‌ಗಳನ್ನು ಮುಚ್ಚಲು ಆದೇಶಿಸಿ, ಮದ್ಯ ಮಾರಾಟ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.