



ರಾಮನಗರ: ಬೆಂಗಳೂರು ಮೈಸೂರು ಎಕ್ಸ್’ಪ್ರೆಸ್ ವೇನಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಂಡಿದೆ. ಎಕ್ಸ್’ಪ್ರೆಸ್ ವೇನಲ್ಲಿ ದ್ವಿಚಕ್ರ, ತ್ರಿಚಕ್ರ ಸೇರಿದಂತೆ ಕೆಲವು ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.
ಬೈಕ್, ಆಟೋ, ಟ್ರ್ಯಾಕ್ಟರ್ ಹಾಗೂ ಇತರ ಸಣ್ಣ ವಾಹನಗಳಿಗೆ ನಿಷೇಧ ಹೇರಿ ಅಧಿಸೂಚನೆ ಹೊರಡಿಸಲಾಗಿದೆ. ಜುಲೈ 12ರಂದೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದ್ದು, ಶೀಘ್ರದಲ್ಲಿಯೇ ಕಾರ್ಯರೂಪಕ್ಕೆ ಬರಲಿದೆ. ಜತೆಗೆ ವಾಹನಗಳಿಗೆ ಗಂಟೆಗೆ 80ರಿಂದ 100 ಕಿಲೋಮೀಟರ್ ವೇಗದ ಮಿತಿ ನಿಗದಿಪಡಿಸಲಾಗಿದೆ.
ಮೋಟರ್ ಸೈಕಲ್ (ಸ್ಕೂಟರ್ ಮತ್ತು ಇತರೆ ದ್ವಿಚಕ್ರವಾಹನ), ತ್ರಿಚಕ್ರವಾಹನ (ಆಟೋ ರಿಕ್ಷಾ ಸೇರಿದಂತೆ), ಮೋಟಾರುರಹಿತ ವಾಹನಗಳು ಟ್ರಾಕ್ಟರ್‌ಗಳು, ಮಲ್ಟಿ ಆಕ್ಸೇಲ್ ಹೈಡ್ರಾಲಿಕ್ ವಾಹನಗಳು, ಕ್ವಾಡ್ರಿ ಚಕ್ರ ವಾಹನಗಳು ನಿಷೇಧಿಸಲಾಗಿರುವ ವಾಹನಗಳಾಗಿವೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.