



ಬೆಂಗಳೂರು: ಬೆಂಗಳೂರು - ಮೈಸೂರು ಹೆದ್ದಾರಿಯ ಕುಂಬಳಗೋಡು ಸಮೀಪ ಟಿಪ್ಪರ್ ಲಾರಿಯೊಂದು ಎರಡು ಕಾರು ಮತ್ತು ಒಂದು ಬೈಕ್ ಮೇಲೆ ಬಿದ್ದ ಪರಿಣಾಮ 6 ಮಂದಿ ಮೃತಪಟ್ಟಿದ್ದಾರೆ. ಈ ದುರ್ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.
ಎರಡು ಕಾರುಗಳಲ್ಲಿ ಒಟ್ಟು 10 ಮಂದಿ ಪ್ರಯಾಣಿಕರಿದ್ದರು. ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಬೈಕ್ ನಲ್ಲಿದ್ದ ಇಬ್ಬರು ಸೇರಿದಂತೆ ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.