



ಉಡುಪಿ: ಮಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಕೋರ್ಸ್‌ಗಳಲ್ಲಿ ಶಿಕ್ಷಣ, ಕ್ರೀಡೆ ಹಾಗೂ ಸರ್ವಾಂಗೀಣ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ಕುಂದಾಪುರದ ನಮ್ಮ ಭೂಮಿ ಸಂಸ್ಥೆಯ ರಾಮಾಂಜಿ ಅವರನ್ನು ಬ್ಯಾಂಕ್ ಆಫ್ ಬರೋಡ ಸಾಧಕ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.
ಹಾಗೂ ವಿವಿಯ ಅಂತಿಮ ಸ್ನಾತಕೋತ್ತರ ಪದವಿಯ ಮುತ್ತಮ್ಮ (ಕ್ರೀಡಾ ಕ್ಷೇತ್ರ), ಮನೋಹರ್ ಪ್ರಸಾದ್ (ಶಿಕ್ಷಣ) ಇವರು ಕೂಡ ಸಾಧಕ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.
ಮಾರ್ಚ್ 18ರಂದು ಮಧ್ಯಾಹ್ನ 2.30ಕ್ಕೆ ಮಂಗಳೂರು ವಿವಿ ಸಿಂಡಿಕೇಟ್ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿವಿ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಅಧ್ಯಕ್ಷತೆಯಲ್ಲಿ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ಮಂಗಳೂರು ವಿವಿ ಕುಲಸಚಿವ ಡಾ.ಸಿ.ಕೆ.ಕಿಶೋರ್ ಕುಮಾರ್ ತಿಳಿಸಿದ್ದಾರೆ.
ರಾಮಾಂಜಿ ಮಂಗಳೂರು ವಿವಿಯ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ 2022-23ನೇ ಸಾಲಿನ ಕನ್ನಡ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ 80.03ರಷ್ಟು ಫಲಿತಾಂಶ ಪಡೆದಿದ್ದು, ಕಲೆ, ಸಾಹಿತ್ಯ, ಸಂಸ್ಕೃತಿ, ಪರಿಸರ, ಶಿಕ್ಷಣ ಕ್ಷೇತ್ರಗಳಲ್ಲಿ ದುಡಿಯುತ್ತಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.