logo
WhatsApp Image 2026-10-07 at 11.10.42 PM - Copy.jpeg
WhatsApp Image 2026-04-02 at 14.46.04.jpeg

ಬಂಟ್ವಾಳ: ಕುತ್ತಿಗೆಗೆ ಆಕಸ್ಮಿಕವಾಗಿ ಹಗ್ಗ ಸಿಲುಕಿ 9 ವರ್ಷದ ಬಾಲಕ ಸಾವು

ಟ್ರೆಂಡಿಂಗ್
share whatsappshare facebookshare telegram
26 Oct 2026
post image

ಬಂಟ್ವಾಳ, ಅ. 26: ಕುತ್ತಿಗೆಗೆ ಆಕಸ್ಮಿಕವಾಗಿ ಹಗ್ಗ ಸಿಲುಕಿ ಉಸಿರುಗಟ್ಟಿ 9 ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಮಾವಿನಕಟ್ಟೆ ಸಮೀಪದ ಕೇಂತಲೆ ಮನೆಯಲ್ಲಿ ಅ. 25ರ ರಾತ್ರಿ ನಡೆದಿದೆ.

ಕೇಂತಲೆ ಮನೆ ನಿವಾಸಿ ಆನಂದ ಪೂಜಾರಿ ಅವರ ಪುತ್ರ ಅಮೃತ್ ಎ. ಪೂಜಾರಿ (9) ಮೃತಪಟ್ಟ ಬಾಲಕ.

ಅ. 25ರ ರಾತ್ರಿ ಅಮೃತ್ ಮನೆಯ ಎದುರಿನ ಹಾಲ್‌ನಲ್ಲಿ ಒಬ್ಬನೇ ಆಟವಾಡುತ್ತಿದ್ದ ಎನ್ನಲಾಗಿದೆ. ಈ ವೇಳೆ ಕಿಟಕಿಗೆ ಮೊದಲೇ ಸಿಕ್ಕಿಸಲಾಗಿದ್ದ ಹಗ್ಗ ಆಕಸ್ಮಿಕವಾಗಿ ಆತನ ಕುತ್ತಿಗೆಗೆ ಸಿಲುಕಿಕೊಂಡಿದೆ. ಇದರಿಂದ ಬಾಲಕ ಉಸಿರುಗಟ್ಟಿ ಹಗ್ಗದಲ್ಲಿ ಸಿಲುಕಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಈ ಸಂದರ್ಭದಲ್ಲಿ ಮನೆಯಲ್ಲಿದ್ದ ಬಾಲಕನ ಸಹೋದರಿ ಪ್ರಾರ್ಥನಾ, ಅಮೃತ್ ಮಾತನಾಡುತ್ತಿಲ್ಲ ಎಂದು ಗಮನಿಸಿ ಜೋರಾಗಿ ಕೂಗುತ್ತಾ ಸಮೀಪದ ಮನೆಯಲ್ಲಿದ್ದ ಚಿಕ್ಕಪ್ಪನ ಮನೆಗೆ ಓಡಿಹೋಗಿದ್ದಾಳೆ. ಬಳಿಕ ಕುಟುಂಬಸ್ಥರು ಆನಂದ ಪೂಜಾರಿ ಅವರ ಮನೆಗೆ ತೆರಳಿ ನೋಡಿದಾಗ, ಅಮೃತ್‌ನ ತಾಯಿ ಗೀತಾ ಅವರು ಮಗನನ್ನು ತೊಡೆಯ ಮೇಲೆ ಮಲಗಿಸಿಕೊಂಡು ಅಳುತ್ತಿದ್ದರು ಎನ್ನಲಾಗಿದೆ.

ಕೂಡಲೇ ಬಾಲಕನಿಗೆ ಉಪಚರಿಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಈ ಕುರಿತು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.