



ಲಕ್ನೋ: ಖ್ಯಾತ ಯೂಟ್ಯೂಬ್ ಗಾಯಕಿ ಫರ್ಮಾನಿ ನಾಜ್ ಅವರ ಸಹೋದರನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಈ ಘಟನೆ ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆಯ ಮೊಹಮ್ಮದ್‍ಪುರ ಮಾಫಿ ಗ್ರಾಮದಲ್ಲಿ ನಡೆದಿದೆ.
ಮೃತನನ್ನು ಖುರ್ಷಿದ್(18) ಎಂದು ಗುರುತಿಸಲಾಗಿದೆ. ಖುರ್ಷಿದ್ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಪೊಲೀಸರ ವರದಿ ಪ್ರಕಾರ, ಸಾಲ್ವಾ ರಸ್ತೆ ಬಳಿ ಭಾನುವಾರ ಕೆಲವು ಬೈಕ್ ಸವಾರರು ಖುರ್ಷಿದ್ ನನ್ನು ಸುತ್ತುವರಿದು ಚಾಕುವಿನಿಂದ ಇರಿದು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಖುರ್ಷಿದ್ ಮೃತಪಟ್ಟಿದ್ದಾನೆ ಎಂದು ವೈದರು ತಿಳಿಸಿದ್ದಾರೆ. ಈ ಸಂಬಂಧ ರತನಪುರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.