logo
WhatsApp Image 2026-04-02 at 14.46.04.jpeg
hindalco everlast.jpeg

ದೈಹಿಕ ವಿಕಲ ಚೇತನರಿಗೆ ಬ್ಯಾಟರಿ ಚಾಲಿತ ಸೌಲಭ್ಯ: ಅರ್ಜಿಆಹ್ವಾನ

ಟ್ರೆಂಡಿಂಗ್
share whatsappshare facebookshare telegram
17 Jan 2025
post image

ಉಡುಪಿ : ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಶೇ.೭೫ ಮತ್ತು ಅದಕ್ಕಿಂತ ಹೆಚ್ಚಿನ ದೈಹಿಕ ವಿಕಲತೆ ಹೊಂದಿದ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಬ್ಯಾಟರಿ ಚಾಲಿತ ವೀಲ್ ಚೇರ್ ಸೌಲಭ್ಯ ಪಡೆಯಲು ಸೇವಾಸಿಂಧು, ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಬೆಂಗಳೂರು ಒನ್ ಸೇವಾಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕದಲ್ಲಿ ಕನಿಷ್ಟ 10 ವರ್ಷಗಳ ಕಾಲ ವಾಸವಾಗಿದ್ದು, ವಾರ್ಷಿಕ ಆದಾಯ 2 ಲಕ್ಷ ರೂ. ಒಳಗಿರುವ, ಯಂತ್ರ ಚಾಲಿತ ದ್ವಿಚಕ್ರ ವಾಹನವನ್ನು ಚಾಲನೆ ಮಾಡಲು ಸಾಮರ್ಥ್ಯ ಹೊಂದಿರದ ಹಾಗೂ ಕನಿಷ್ಟ ಒಂದು ಕೈ, ಒಂದು ಕಣ್ಣು ಸ್ವಾಧೀನದಲ್ಲಿದ್ದು ಹಾಗೂ ಬ್ಯಾಟರಿ ಚಾಲಿತ ವೀಲ್ ಚೇರ್ ಚಲಾಯಿಸಲು ಇತರೆ ಎಲ್ಲಾ ರೀತಿಯಲ್ಲಿ ಸದೃಡರಾಗಿರುವ, ಈ ಹಿಂದೆ ಸರ್ಕಾರದಿಂದ ಯಂತ್ರಚಾಲಿತ ದ್ವಿಚಕ್ರವಾಹನವನ್ನು ಪಡೆದಿರದ ವಿಕಲಚೇತನರು ಜನವರಿ 21 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ: 0820-2574810, 2574811 ಅಥವಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳಮಹಡಿ, ಸಿಂಡಿಕೇಟ್ ಬ್ಯಾಂಕ್ ಹತ್ತಿರ, ಜಿಲ್ಲಾ ಪಂಚಾಯತ್ ವಿಭಾಗ, ರಜತಾದ್ರಿ, ಮಣಿಪಾಲ ಕಛೇರಿಯನ್ನು ಖುದ್ದಾಗಿಯೂ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.