logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಬೆಳಪು ವ್ಯವಸಾಯ ಸಹಕಾರಿ ಸಂಘ: ಸೆ.2ರಂದು ಅಮೃತ ಮಹೋತ್ಸವ ಸಂಭ್ರಮಾಚರಣೆ, ಉಚ್ಚಿಲದ ನವೀಕೃತ ಶಾಖೆ ಹಾಗೂ "ಸಹಕಾರಿ ಮಹಲ್" ಉದ್ಟಾಟನೆ

ಟ್ರೆಂಡಿಂಗ್
share whatsappshare facebookshare telegram
1 Sept 2023
post image

ಪಡುಬಿದ್ರಿ: ದೇವಿಪ್ರಸಾದ್ ಶೆಟ್ಟಿ ಸಾರಥ್ಯದಲ್ಲಿ ಮುನ್ನಡೆಯುತ್ತಿರುವ ಬೆಳಪು ವ್ಯವಸಾಯ ಸಹಕಾರಿ ಸಂಘವು ಅಮೃತ ಮಹೋತ್ಸವ ವರ್ಷಾಚರಣೆಯ ಸಂಭ್ರಮದಲ್ಲಿದ್ದು, ಸಂಘದ ಅಮೃತ ಮಹೋತ್ಸವದ ಸವಿ ನೆನಪಿಗಾಗಿ ಉಚ್ಚಿಲದಲ್ಲಿ ಸಹಕಾರಿ ಮಹಲ್ ಕಟ್ಟಡದ ಉದ್ಘಾಟನಾ ಸಮಾರಂಭವು ಸೆಪ್ಟಂಬರ್ 2ರಂದು ಬೆಳಗ್ಗೆ 9.30 ಗಂಟೆಗೆ ನಡೆಯಲಿದೆ.

ಬೆಳಪು ಸಹಕಾರಿ ಸಂಘದ ಪ್ರಧಾನ ಕಚೇರಿಯ ಪಣಿಯೂರಿನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ ಮಾಹಿತಿ ನೀಡಿದರು. ಕಾರ್ಯಕ್ರಮಕ್ಕೆ ಮುನ್ನ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಿಂದ ಉಚ್ಚಿಲ ಸಹಕಾರಿ ಮಹಲ್‌ವರೆಗೆ ಸಹಕಾರಿ ಮೆರವಣಿಗೆ ನಡೆಯಲಿದೆ.

ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸುವರು. ನೂತನ ಸಹಕಾರಿ ಮಹಲ್‌ನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಸಹಕಾರಿ ಸಭಾಂಗಣವನ್ನು ನಬಾರ್ಡ್ ಮುಖ್ಯ ಮಹಾಪ್ರಬಂಧಕ ಟಿ. ರಮೇಶ್, ನವೋದಯ ಸಭಾಂಗಣವನ್ನು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಎಂ.ಎನ್. ಆರ್. ಕಾನ್ಪರೆನ್ಸ್ ಹಾಲ್‌ನ್ನು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಉದ್ಘಾಟಿಸುವರು. ಅಮೃತ ದರ್ಪಣ ಸ್ಮರಣ ಸಂಚಿಕೆಯನ್ನು ಶ್ಯಾಮಿಲಿ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ಜಿ. ಶಂಕರ್ ಬಿಡುಗಡೆಗೊಳಿಸುವರು.

ಈ ಸಂದರ್ಭದಲ್ಲಿ ಸಹಕಾರಿ ಕ್ಷೇತ್ರದ ಅಗ್ರಗಣ್ಯ ನಾಯಕ, ಅಜಾತಶತ್ರು, ಸಹಕಾರಿಗಳ ಆಪದ್ಬಾಂಧವರೆಂದು ಹೆಗ್ಗಳಿಕೆ ಗಳಿಸಿರುವ ಸಹಕಾರಿ ರತ್ನ ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ “ಸಹಕಾರಿ ಧ್ರುವ” ಪ್ರಶಸ್ತಿ ಪ್ರದಾನಿಸಿ ಗೌರವಿಸಲಾಗುವುದು.

ಬೆಳಕು ಸಹಕಾರಿ ಸಂಘ ನಡೆದು ಬಂದ ದಾರಿ: 1948ರಲ್ಲಿ ಸ್ಥಾಪಿತವಾದ ಬೆಳಪು, ಎಲ್ಲೂರು ಮತ್ತು ಬಡಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರ ಆರ್ಥಿಕ ಸಬಲೀಕರಣದ ಉದ್ದೇಶದೊಂದಿಗೆ ಗ್ರಾಮದ ಹತ್ತು ಮಂದಿ ಹಿರಿಯರು ಒಗ್ಗೂಡಿ ಪಣಿಯೂರಿನಲ್ಲಿ ಸಣ್ಣ ಕಟ್ಟಡದೊಂದಿಗೆ ಪ್ರಾರಂಭಿಸಲಾಗಿತ್ತು. ಈಗ ಸಹಕಾರಿ ಸಂಘವು ಪಣಿಯೂರು ಪ್ರಧಾನ ಕಚೇರಿ ಸಹಕಾರಿ ಸೌಧ ಸಹಿತ ಬೆಳಪು ಶಾಖೆ ಸಹಕಾರಿ ಸಂಭ್ರಮ, ಮೂಳೂರಿನಲ್ಲಿ ಸಹಕಾರಿ ಬಂಧು, ಎಲ್ಲೂರಿನಲ್ಲಿ ಸಹಕಾರಿ ಮಿತ್ರ ಹಾಗೂ ಉಚ್ಚಿಲದಲ್ಲಿ ಹೊಸದಾಗಿ ಸಹಕಾರಿ ಮಹಲ್ ಕಟ್ಟಡ ನಿರ್ಮಾಣಗೊಂಡಿದ್ದು, ಎಲ್ಲ ಕಡೆಗಳಲ್ಲೂ ಸ್ವಂತ ಕಟ್ಟಡ ಸಹಿತವಾಗಿ ಸಂಪೂರ್ಣ ಹವಾನಿಯಂತ್ರಿತ ವ್ಯವಸ್ಥೆಯೊಂದಿಗೆ ಕಂಪ್ಯೂಟರೀಕೃತ ಸೌಕರ್ಯದೊಂದಿಗೆ ಆಧುನಿಕತೆಗೆ ಹೊಂದಿಕೊಂಡು ಸೇವೆ ನೀಡುತ್ತಿದೆ.

ಸತತ 16 ವರ್ಷಗಳಿಂದ ಅತ್ಯುತ್ತಮ ಸಹಕಾರಿ ಸಾಧನೆ: ಬೆಳಪು ವ್ಯವಸಾಯ ಸಹಕಾರಿ ಸಂಘವು ಸ್ವತಂತ್ರವಾಗಿ ಕಾರ್ಯಾಚರಣೆ ಮಾಡುತ್ತಿರುವ ಸಹಕಾರಿ ಸಂಘವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈವರೆಗೆ 4350 ಸದಸ್ಯ ಬಲದೊಂದಿಗೆ 60 ಕೋಟಿ ರೂಪಾಯಿ ಠೇವಣಾತಿಯನ್ನು ಹೊಂದಿದ್ದು, 100 ಕೋಟಿ ರೂಪಾಯಿ ಠೇವಣಾತಿಯ ಗುರಿ ಹೊಂದಿದೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಎಂ. ಎನ್. ರಾಜೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿರುವ ಸಂಘವು, ಸತತ 25 ವರ್ಷಗಳಿಂದ ಎ ಶ್ರೇಣಿಯ ಬ್ಯಾಂಕಿಂಗ್ ಎಂಬ ಮಾನ್ಯತೆ ಹೊಂದಿದ್ದು ಸಂಘದ ಒಟ್ಟು ಸಾಧನೆಗಳಿಗಾಗಿ ಸತತ 16 ವರ್ಷಗಳಿಂದ ಅತ್ಯುತ್ತಮ ಸಹಕಾರಿ ಎಂಬ ಕಿರೀಟವನ್ನೂ ಮುಡಿಗೇರಿಸಿಕೊಂಡಿದೆ.

ಆಡಳಿತ ಮಂಡಳಿಯ ನಿರ್ದೇಶಕರಾದ ಪಾಂಡು ಶೆಟ್ಟಿ, ಗೋಪಾಲ ಪೂಜಾರಿ, ಸೈಮನ್ ಡಿಸೋಜ, ಪಾಂಡು ಎಂ. ಶೇರಿಗಾರ್, ಅಲಿಯಬ್ಬ, ದ್ಯುಮಣಿ ಆರ್. ಭಟ್, ಬಾಲಕೃಷ್ಣ ಎಸ್. ಆಚಾರ್ಯ, ಶೋಭಾ ಬಿ. ಭಟ್, ಮೀನಾ ಪೂಜಾರ್ತಿ, ವಿಮಲಾ ಅಂಚನ್, ಅನಿತಾ ಆನಂದ, ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರತಿನಿ ಬಾಲಕೃಷ್ಣ ಭಟ್, ಮುಖ್ಯ ಕಾರ್ಯನಿರ್ವಹಣಾಕಾರಿ ಸುಲೋಚನಾ ದೇವಾಡಿಗ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.