



ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿ ಶಾಸಕರಾಗಿದ್ದ ಕೆ.ವಸಂತ ಬಂಗೇರ (79) ಅವರು ಬುಧವಾರ ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ವಸಂತ ಬಂಗೇರಾ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಇಂದು ಸಂಜೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಮೇ 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ. ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದ ಅವರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಐದು ಬಾರಿ ಶಾಸಕರಾಗಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.