logo
WhatsApp Image 2026-04-02 at 14.46.04.jpeg
hindalco everlast.jpeg

ಬೆಳ್ತಂಗಡಿ: ಗೆಲ್ಲು ಕಡಿಯುತ್ತಿದ್ದ ವೇಳೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು..!

ಟ್ರೆಂಡಿಂಗ್
share whatsappshare facebookshare telegram
5 Oct 2024
post image

ಬೆಳ್ತಂಗಡಿ: ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ತಾಲೂಕಿನ ಪುದುವೆಟ್ಟು ಗ್ರಾಮದ ಮಿರ್ಯಾ ಬಳಿ ಅ. 4ರಂದು ನಡೆದಿದೆ.

ಮೃತ ವ್ಯಕ್ತಿಯನ್ನು ಶಿಶಿಲದ ಕಾರೆಗುಡ್ಡೆ ನಿವಾಸಿ ಪ್ರವೀಣ್‌ (35) ಎಂದು ಗುರುತಿಸಲಾಗಿದೆ.

ಮಿಯಾರ್‌ ಸಮೀಪ ಕೂಲಿ ಕೆಲಸಕ್ಕೆಂದು ಆಗಮಿಸಿದ್ದ ಅವರು ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ಮರದಲ್ಲೇ ಅಸ್ವಸ್ಥಗೊಂಡು ಕೆಳಗೆ ಬಿದ್ದಿದ್ದಾರೆ. ತತ್‌ಕ್ಷಣ ಸ್ಥಳದಲ್ಲಿದ್ದವರು ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಆ ವೇಳೆಗೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಖಚಿತ ಪಡಿಸಿದ್ದರು. ಮೃತರು ಪತ್ನಿ, ಇಬ್ಬರು ಮಕ್ಕಳು ಸೇರಿದಂತೆ ತಂದೆ, ತಾಯಿಯನ್ನು ಅಗಲಿದ್ದಾರೆ. ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.