logo
WhatsApp Image 2026-04-02 at 14.46.04.jpeg
hindalco everlast.jpeg

ಬೆಳ್ತಂಗಡಿ: ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು : ಭುಗಿಲೆದ್ದ ಭಕ್ತರ ಆಕ್ರೋಶ

ಟ್ರೆಂಡಿಂಗ್
share whatsappshare facebookshare telegram
11 Jul 2023
post image

ಬೆಳ್ತಂಗಡಿ:ಕೊರಗಜ್ಜನ ಗುಡಿಗೆ ಕಿಡಿಗೇಡಿಗಳು ಬೆಂಕಿಯಿಟ್ಟ ಘಟನೆ ಬಜಿರೆ ಗ್ರಾಮದ ಬಾಡಾರು ಕೊರಂಗಲ್ಲುವಿನಲ್ಲಿ ನಡೆದಿದ್ದು, ಭಕ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳ್ತಂಗಡಿ -ಬಂಟ್ವಾಳ ತಾಲೂಕು ಗಡಿ ಭಾಗದಲ್ಲಿರುವ ಬಾಡಾರು ಎಂಬಲ್ಲಿ ಇರುವ ಕೊರಗಜ್ಜನ ಗುಡಿಯಲ್ಲಿ ಸಾರ್ವಜನಿಕವಾಗಿ ನೇಮೋತ್ಸನ ನಡೆಯುತ್ತಿತ್ತು. ಆದರೆ ಗುಡಿಯ ಜಾಗದ ವಿಚಾರ ಸೇರಿ ಹಲವು ವಿಚಾರಕ್ಕೆ ಆಗಾರ ಜಗಳ, ಕಿರಿಕ್ ಗಳು ನಡೆಯುತ್ತಿತ್ತು ಎನ್ನಲಾಗಿದೆ.

ಆದರೆ ಕಿಡಿಗೇಡಿಗಳು ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟಿದ್ದು, ಭಕ್ತರ ಆಕ್ರೋಶ ಭುಗಿಲೆದ್ದಿದೆ. ಕೊರಗಜ್ಜನ ಗುಡಿಗೆ ಬೆಂಕಿಯಟ್ಟ ಆರೋಪಿಗಳನ್ನು ಬಂಧಿಸುವಂತೆ ಭಕ್ತರು ಆಗ್ರಹಿಸಿದ್ದಾರೆ. ಘಟನೆ ಹಿನ್ನೆಲೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪೊಲೀಸ್ ತನಿಖೆಯಿಂದಷ್ಟೇ ಘಟನೆಗೆ ನಿಖರ ಕಾರಣ ತಿಳಿದು ಬರಬೇಕಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.