logo
WhatsApp Image 2026-04-02 at 14.46.04.jpeg
hindalco everlast.jpeg

ಬೆಳ್ತಂಗಡಿ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಮೃತ್ಯು.

ಟ್ರೆಂಡಿಂಗ್
share whatsappshare facebookshare telegram
12 Feb 2024
post image

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದಲ್ಲಿ ನಡೆದಿದೆ.

ಧರ್ಮಸ್ಥಳದ ಪಿಜತ್ತಡ್ಕದ ಕಿಶೋರ್-ಸೌಮ್ಯಾ ದಂಪತಿ ಪುತ್ರಿ ತ್ರಿಶಾ(16) ಮೃತ ವಿದ್ಯಾರ್ಥಿನಿ ಎಂದು ತಿಳಿಯಲಾಗಿದೆ.

ಫೆ.7ರಂದು ವಿಷ ಸೇವಿಸಿದ್ದ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ಇಂದು ಮುಂಜಾನೆ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾಳೆ.

ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಈಕೆಗೆ ಡ್ರಾಯಿಂಗ್ ಶಿಕ್ಷಕ ಇಲ್ಲಸಲ್ಲದ ಆರೋಪ ಮಾಡಿ ಇನ್ನೊಂದು ವಿದ್ಯಾರ್ಥಿನಿಗೆ ಮಾಡಿದ ಮೆಸೇಜ್ ನಿಂದ ಅವಮಾನಗೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನಲಾಗಿದೆ. ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.