logo
WhatsApp Image 2026-04-02 at 14.46.04.jpeg
hindalco everlast.jpeg

ಬೆಳ್ತಂಗಡಿ: ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ಬಾಲಕ ಸಾವು..!!

ಟ್ರೆಂಡಿಂಗ್
share whatsappshare facebookshare telegram
21 Oct 2021
post image

ಬೆಳ್ತಂಗಡಿ: ನದಿಗೆ ಸ್ನಾನಕ್ಕೆಂದು ತೆರಳಿದ ಬಾಲಕನೊಬ್ಬ ಮುಳುಗಿ ಸಾವನ್ನಪ್ಪಿದ ಘಟನೆ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ಎಂಬಲ್ಲಿ ನಡೆದಿದೆ.

ಕಾಶಿಪಟ್ನ ಗ್ರಾಮದ ಪಿಂಟೊ ನಗರದ ನಿವಾಸಿ ಮೇಲ್ವಿನ್ ಪಿಂಟೋ ಎಂಬವರ ಪುತ್ರ ಮಾರ್ಟಿನ್ ಪಿಂಟೊ(15)ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ.

ಅ. 19ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆ ಸಮೀಪವಿರುವ ಫಲ್ಗುಣಿ ನದಿಗೆ ಸ್ನಾನಕ್ಕೆಂದು ಹೋದವನು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಅವನ ಮೃತದೇಹ ಮರುದಿನ (ಅ. 20) ಮೊರಂತಕಾಡು ಸೇತುವೆಯ ಬಳಿ ಪತ್ತೆಯಾಗಿದೆ.

ಘಟನೆಯ ವಿವರ: ಕಾಶಿಪಟ್ಣ ಗ್ರಾಮದ ಪಿಂಟೊ ನಗರ ನಿವಾಸಿ ಮೇಲ್ವಿನ್ ಪಿಂಟೋರವರು ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಇವರ ಪತ್ನಿ ಹೆಲನ್ ಪಿಂಟೋ ಹಾಗೂ ಮಕ್ಕಳಾದ ಮಾರ್ಟಿನ್ ಪಿಂಟೋ ಮತ್ತು ಮೆಲ್ ರಾಯ್ ಪಿಂಟೋರವರೊಂದಿಗೆ ವಾಸ್ತವ್ಯವಿದ್ದರು. ಹೆಲನ್ ಪಿಂಟೋರವರು ಅ.19ರಂದು ಮಧ್ಯಾಹ್ನ ಔಷಧಿ ತರಲೆಂದು ನೆರೆಮನೆಯ ಮೆಲ್ವಿನ್ ರೋಡ್ರಿಗಸ್ ಮತ್ತು ಸೆಲಿನ್ ರೋಡ್ರಿಗಸ್ ರೊಂದಿಗೆ ಮೂಡಬಿದ್ರೆಯ ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ಇಬ್ಬರೂ ಮಕ್ಕಳು ಮನೆಯಲ್ಲಿದ್ದರು.

ಸಂಜೆ ತಾಯಿ ಮನೆಗೆ ಮರಳಿದ ವೇಳೆ ಮಗ ಮಾರ್ಟಿನ್ ಮನೆಯಲ್ಲಿ ಕಾಣದೇ ಇದ್ದಾಗ ಮನೆ ಸುತ್ತಮುತ್ತಲಿನ ಪರಿಸರದಲ್ಲಿ ಹುಡುಕಾಟ ನಡೆಸಿದ್ದ ವೇಳೆ ಮನೆಯ ಸಮೀಪದ ಮೊರಂತಕಾಡು ಸೇತುವೆ ಕೆಳಗಿರುವ ಮುರಿದ ಹಳೆಯ ಸೇತುವೆ ಬಳಿ ಬಾಲಕನ ಬಟ್ಟೆ, ಬೈರಸು ಮತ್ತು ಚಪ್ಪಲಿ ಇರುವುದು ಕಂಡುಬಂದಿತ್ತು. ಅಲ್ಲದೇ ಮನೆಯಲ್ಲಿ ಬಟ್ಟೆ ಒಣಗಲು ಹಾಕುವ ನೈಲಾನ್ ದಾರವನ್ನು ಹೊಳೆಯ ನೀರಿನಲ್ಲಿರುವ ಗಿಡಕ್ಕೆ ಕಟ್ಟಿದ್ದು ಅದರ ಇನ್ನೊಂದು ತುದಿ ಸೇತುವೆ ಮೇಲೆ ಇತ್ತೆನ್ನಲಾಗಿದೆ. ಈ ಬಗ್ಗೆ ಬಾಲಕನ ತಾಯಿ ಕಾಣೆಯಾದ ತಮ್ಮ ಮಗನನ್ನು ಹುಡುಕಿ ಕೊಡುವಂತೆ ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ತಮ್ಮ ಮಗ ಸ್ನಾನಕ್ಕೆಂದು ನದಿ ನೀರಿಗೆ ಇಳಿದು ಹೊಳೆಯಲ್ಲಿ ಮುಳುಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ವೇಣೂರು ಪೊಲೀಸರು ಬುಧವಾರ ಅಗ್ನಿಶಾಮಕ ದಳ ಮತ್ತು ಮುಳುಗು ತಜ್ಞರಿಂದ ಮೊರಂತಕಾಡು ಸೇತುವೆಯ ಬಳಿ ಶೋಧ ಕಾರ್ಯ ನಡೆಸಿದ ವೇಳೆ ಬಾಲಕನ ಮೃತದೇಹ ಪತ್ತೆಯಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.